ಬೆಂ.ಗ್ರಾ.ಜಿಲ್ಲೆ: ತರಬೇತಿಗಾಗಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಆಡಳಿತ ನ್ಯಾಯಾಧೀಕರಣ ಯೋಜನೆಯಡಿ ತರಬೇತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮತ್ತು ನೆಲಮಂಗಲ ತಾಲ್ಲೂಕುಗಳ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಸಮಾಜ ಕಲ್ಯಾಣ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ 2021ರ ಜುಲೈ 01 ರಿಂದ 2021ರ ಆಗಸ್ಟ್ 14ರವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದ್ದು, ಆಗಸ್ಟ್ 16ರಿಂದ 31ರವರೆಗೆ ಅರ್ಜಿ ಪರಿಶೀಲನೆ ಹಾಗೂ ಆಯ್ಕೆ ಪ್ರಕ್ರಿಯೆ ನಡೆಸಿ, ಅಕ್ಟೋಬರ್ ‌01 ರಿಂದ ವೃತ್ತಿ ತರಬೇತಿ ಪ್ರಾರಂಭಿಸಲಾಗುವುದು.  

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 40 ವರ್ಷ ವಯೋಮಿತಿಯೊಳಗಿರಬೇಕು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ಮತ್ತು ನೆಲಮಂಗಲ ತಾಲ್ಲೂಕುಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಎರಡು ವರ್ಷದ ಒಳಗೆ ಕಾನೂನು ಪದವಿಯನ್ನು ಪಡೆದಿರಬೇಕು.

ಕಾನೂನು ಪದವೀಧರರ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಗಳ ಒಳಗಿರಬೇಕು. ತರಬೇತಿ ಅವಧಿ 2 ವರ್ಷಗಳಾಗಿದ್ದು, ಮಾಸಿಕ ರೂ.10,000/- ಗಳ ಶಿಷ್ಯ ವೇತನ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ ಅಥವಾ 20 ವರ್ಷಕ್ಕಿಂತ ಹೆಚ್ಚಿನ ಅನುಭವ ಹೊಂದಿರುವ ಹಿರಿಯ ವಕೀಲರಲ್ಲಿ ತರಬೇತಿ ನಿಯೋಜಿಸಲಾಗುವುದು. 

ಆಯ್ಕೆಯಾದ ಅಭ್ಯರ್ಥಿಗಳು ಯಾವುದೇ ಕಾರಣಕ್ಕೂ ತರಬೇತಿಯನ್ನು ಪೂರ್ಣಗೊಳಿಸದೆ ಮಧ್ಯಂತರದಲ್ಲಿ ಬಿಟ್ಟು ಹೋಗಬಾರದು ಹಾಗೆ ಬಿಟ್ಟು ಹೋದ ಪಕ್ಷದಲ್ಲಿ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ವಾಪಸ್ಸು ಪಡೆಯಲಾಗುವುದು ಹಾಗೂ ಈ ನಿಯಮ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ದಿಮೆಯಲ್ಲಿ ನೇಮಕ ಹೊಂದುವವರಿಗೆ ಅನ್ವಯಿಸುವುದಿಲ್ಲ. ಸುಳ್ಳು ದಾಖಲೆ ಮಾಹಿತಿಯನ್ನು ಒದಗಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನಿನ ಅನ್ವಯ ಶಿಕ್ಷೆಗೆ ಗುರಿ ಪಡಿಸಲಾಗುವುದು ಹಾಗೂ ತರಬೇತಿ ಅವಧಿಯಲ್ಲಿ ಪಾವತಿಸಿದ ಶಿಷ್ಯವೇತನ ಶೇ.10 ರಂತೆ ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.

ಅರ್ಜಿಯಲ್ಲಿನ ಮಾಹಿತಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 

ಆಯ್ಕೆ ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 217, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ,  ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ದೂರವಾಣಿ ಸಂಖ್ಯೆ: 080-29787447 ಹಾಗೂ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ.:27681784, ದೊಡ್ಡಬಳ್ಳಾಪುರ ದೂ.ಸಂ.: 27623681, ಹೊಸಕೋಟೆ ದೂ.ಸಂ.: 27931528 ಮತ್ತು ನೆಲಮಂಗಲ-ದೂ.ಸಂ.: 27723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ ಬ್ಯಾಕ್ ಆಕ್ರೋಶ| Video

ಹಿಂಸಾಪೀಡಿತ ಮಣಿಪುರಕ್ಕೆ 2 ವರ್ಷಗಳ ಬಳಿಕ ಪ್ರಧಾನಿ ಮೋದಿ ಭೇಟಿ.. ಹಲವೆಡೆ ಗೋ

2023ರ ಮೇ ನಲ್ಲಿ ಮಣಿಪುರದಲ್ಲಿ ಭಾರೀ ಹಿಂಸಾಚಾರ ಸಂಭವಿಸಿದ ನಂತರ ಎರಡು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಭೇಟಿ ನೀಡಿದ್ದಾರೆ.

[ccc_my_favorite_select_button post_id="113885"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಸಾಲಬಾಧೆ: ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಮುಂದಾದ ದಂಪತಿ‌‌.. ಪತಿ ಸಾವು, ಪತ್ನಿ ಪಾರು..!

ಹೊಸಕೋಟೆ: ಸಾಲಬಾಧೆಯಿಂದ ಬೇಸತ್ತ ಕುಟುಂಬವೊಂದು ಆತ್ಮಹತ್ಯೆಗೆ (Suicide) ಯತ್ನಿಸಿದ್ದು, ಪರಿಣಾಮ ಮೂವರು ಸಾವನ್ನಪ್ಪಿದ್ದರೆ ಒಬ್ಬರು ಗಂಭೀರವಾಗಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಶಿವು (32 ವರ್ಷ), ಮಗಳು ಚಂದ್ರಕಲಾ (11ವರ್ಷ) ಮಗ ಉದಯ್ ಸೂರ್ಯ (07 ವರ್ಷ) ಎಂದು ಗುರುತಿಸಲಾಗಿದೆ. ಶಿವುವಿನ

[ccc_my_favorite_select_button post_id="113883"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!