ಕೋವಿಡ್ ಮೂರನೇ ಅಲೆ ಎದುರಿಸಲು ಅಗತ್ಯ ಜಾಗೃತಿ ಮೂಡಿಸಿ: ಶಾಸಕ‌ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ: ಕರೊನಾ ಸೋಂಕಿನ ಮೂರನೇ ಅಲೆ ಮಕ್ಕಳಿಗೆ ಹರಡುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ, ಜನರಿಗೆ ಜಾಗೃತಿ ಮೂಡಿಸಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಕರೆ ನೀಡಿದರು.

ನಗರದ ತಾಲೂಕು ಕಚೇರಿ ಆವರಣದಿಂದ ಜಿಲ್ಲಾಡಳಿತ, ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಮಕ್ಕಳ ತಜ್ಞರ ನಡೆ ಹಳ್ಳಿ ಕಡೆಗೆ ಕಾರ್ಯಕ್ರಮದಡಿ,  ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಕ್ಕಳಿಗೆ ಕೋವಿಡ್ ಹರಡಲು ಆರಂಭವಾದರೆ ಪರಿಸ್ಥಿತಿ ಗಂಭೀರವಾಗಿರುತ್ತದೆ. ಈ ದಿಸೆಯಲ್ಲಿ ವೈದ್ಯರು, ಆಶಾ ಕಾರ್ಯಕರ್ತೆಯರು, ಗ್ರಾಮಗಳಿಗೆ ತೆರಳಿ ಮಾರ್ಗದರ್ಶನ ನೀಡಬೇಕಿದೆ. ಮಕ್ಕಳ ಆರೋಗ್ಯದ ಕಡೆ ಗಮನ ಹರಿಸುವುದು ಪೋಷಕರ ಕರ್ತವ್ಯವಾಗಿದೆ. ಮಕ್ಕಳು ಅಪೌಷ್ಟಿಕತೆಯಿಂದ ಬಳಲದಂತೆ ಸರ್ಕಾರ ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದ್ಬಳಕೆಯಾಗಬೇಕಿದೆ ಎಂದರು.

ತಹಶಿಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ, ಇಂದಿನಿಂದ ಜಿಲ್ಲೆಯಾದ್ಯಂತ ಮಕ್ಕಳ ತಜ್ಞರ ನಡಿಗೆ ಹಳ್ಳಿ  ಕಡೆಗೆ ಎಂಬ ವಿನೂತನ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುತ್ತಿದೆ. ತಾಲೂಕು ಮಟ್ಟದಲ್ಲಿ ಕಾರ್ಯಕ್ರಮದಲ್ಲಿ 6 ವೈದ್ಯಕೀಯ ತಂಡವನ್ನು ವ್ಯವಸ್ಥೆ ಮಾಡಲಾಗಿದೆ. ಈ ತಂಡಗಳ ಮೂಲಕ 20ರಿಂದ 25 ದಿನಗಳವರೆಗೆ ತಾಲೂಕಿನ ವಿವಿಧ ಗ್ರಾಮ ಹಾಗೂ ವಾರ್ಡ್ ಗಳಿಗೆ ಬೇಟಿ ನೀಡಿ ಮಕ್ಕಳ ತಪಾಸಣೆ ಮಾಡಲಾಗುವುದು. ಅಪೌಷ್ಟಿಕತೆ ಹೊಂದಿರುವ ಮಕ್ಕಳನ್ನು ಗುರುತಿಸಿ ಪೌಷ್ಟಿಕಾಂಶದ ಕಿಟ್ ನೀಡಲಾಗುವುದು. ತಾಲೂಕಿನಲ್ಲಿ 17 ತೀರ ಅಪೌಷ್ಟಿಕತೆ ಇರುವ ಮಕ್ಕಳು ಹಾಗೂ 426 ಸಾಧಾರಣ ಮಕ್ಕಳನ್ನು ಗುರುತಿಸಲಾಗಿದೆ. ಮಕ್ಕಳಿಗೆ ಯಾವುದೇ ತೊಂದರೆ ಇದ್ದರೆ ಗುರುತಿಸಿ ಸೂಕ್ತ ಚಿಕಿತ್ಸೆ ನೀಡಲಾಗುವುದು ಮತ್ತು ಕೋವಿಡ್ ಸುರಕ್ಷತೆಯ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಲಾಗುವುದು ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ರಮೇಶ್, ಸಿಡಿಪಿಒ ಅನಿತಾಲಕ್ಷ್ಮೀ, ಬಿಇಓ ಆರ್.ವಿ.ಶುಭಮಂಗಳ ಮತ್ತಿರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ ಮಾಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಜಾತಿ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಾರದ ಮೇಲೆ ಸಂಘಟನೆ

“ಯಾವುದೇ ಪರಿಸ್ಥಿತಿಯಲ್ಲಾದರೂ ಸರಿ ಮಹಿಳಾ ನೌಕರರು ಜಾತಿ ಸಂಘಗಳ ಆಧಾರದ ಮೇಲೆ ಸಂಘಟನೆ ಮಾಡಬೇಡಿ, ಮಹಿಳಾ ಶಕ್ತಿ ಆಧಆರದ ಮೇಲೆ ಸಂಘಟನೆ ಮಾಡಿ. ನಿಮ್ಮದು ಕೇವಲ ಒಂದೇ ಒಂದು ಸಂಘ ಇರಬೇಕು. ಅದು ಮಹಿಳಾ

[ccc_my_favorite_select_button post_id="117023"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಶ್ವಕಪ್ ವಿಜೇತ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ನಗದು ಬಹುಮಾನ, ಸರ್ಕಾರಿ ಉದ್ಯೋಗ

ವಿಶ್ವಕಪ್ ವಿಜೇತ ಭಾರತದ ಅಂಧ ಮಹಿಳಾ ಕ್ರಿಕೆಟ್ ತಂಡಕ್ಕೆ ಶುಭ ಹಾರೈಸಿ ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರ್ನಾಟಕದ ಕ್ರಿಕೆಟ್ ಪಟುಗಳಿಗೆ ತಲಾ ಹತ್ತು ಲಕ್ಷ ನಗದು ಬಹುಮಾನದ ಜೊತೆಗೆ ಸರ್ಕಾರಿ ಉದ್ಯೋಗ ಘೋಷಿಸಿದರು.

[ccc_my_favorite_select_button post_id="116681"]
ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಕೆಲವೇ ಗಂಟೆಗಳಲ್ಲಿ ಸರಗಳ್ಳನ ಬಂಧನ.. ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ತಂಡಕ್ಕೆ ವ್ಯಾಪಕ ಪ್ರಶಂಸೆ

ಮಹಿಳೆಯ ಮಾಂಗಲ್ಯ ಸರವನ್ನು ಕಿತ್ತು ಬೈಕ್‌ನಲ್ಲಿ ಪರಾರಿಯಾಗಿರುವ ಘಟನೆ ನಡೆದು ಕೆಲವೇ ಗಂಟೆಯೊಳಗೆ ಆರೋಪಿಯನ್ನು (Chain snatcher) ಬಂಧಿಸುವಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ.ಪಾಟೀಲ್ ನೇತೃತ್ವದ

[ccc_my_favorite_select_button post_id="116820"]
ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ದೊಡ್ಡಬಳ್ಳಾಪುರ: ನಿಂತಿದ್ದ ಬಸ್‌ಗೆ ಆಟೋ ಡಿಕ್ಕಿ.. ಮೂವರಿಗೆ ಪೆಟ್ಟು

ಖಾಸಗಿ ಬಸ್ಗೆ ಹಿಂದಿನಿಂದ ಪ್ಯಾಸೆಂಜರ್ ಆಟೋ ಡಿಕ್ಕಿ ಹೊಡೆದ ಪರಿಣಾಮ (Accident) ಆಟೋದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಸಂಜೆ ತಾಲೂಕಿನ ಕಂಟನಕುಂಟೆ ಸಮೀಪ ಸಂಭವಿಸಿದೆ.

[ccc_my_favorite_select_button post_id="116950"]

ಆರೋಗ್ಯ

ಸಿನಿಮಾ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್ ಇಲ್ಲಿದೆ ನೋಡಿ

ದರ್ಶನ್ ಸೆಲೆಬ್ರಿಟಿಸ್ಗೆ ಗುಡ್‌ನ್ಯೂಸ್: ಡೆವಿಲ್ ಸಿನಿಮಾದ 3ನೇ ಸಾಂಗ್ ಬಿಡುಗಡೆ| Video ಲಿಂಕ್

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ( Actor Darshan) ಅಭಿನಯದ "ದಿ ಡೆವಿಲ್" (The Devil) ಸಿನಿಮಾದ ಮೂರನೇ ಗೀತೆ ಬಿಡುಗಡೆಯಾಗಿದೆ.

[ccc_my_favorite_select_button post_id="116277"]
error: Content is protected !!