ಕೋವಿಡ್ ಸೋಂಕಿತರ ಚಿಕಿತ್ಸೆಗೆ ದೊಡ್ಡಬಳ್ಳಾಪುರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆ

ದೊಡ್ಡಬಳ್ಳಾಪುರ: ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕಿಗೆ ಒಳಗಾಗುವ ಸೋಂಕಿತರಿಗೆ ತುರ್ತು ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ದೇಶಾದ್ಯಂತ ಮೇಕ್ ಶಿಫ್ಟ್(Make Shift) ಆಸ್ಪತ್ರೆಗಳನ್ನು ತೆರೆಯಲಾಗುತ್ತಿದ್ದು, ಕರ್ನಾಟಕ ರಾಜ್ಯಕ್ಕೆ ಅನುಮೋದನೆಯಾಗಿರುವ 20, 50, 100 ಹಾಸಿಗೆಗಳ ಮೂರು ಆಸ್ಪತ್ರೆಗಳ ಪೈಕಿ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ 100 ಆಕ್ಸಿಜನೇಟೆಡ್ ಬೆಡ್‌ಗಳ ಮೇಕ್ ಶಿಫ್ಟ್(Make Shift) ಆಸ್ಪತ್ರೆ ಒಂದಾಗಿರುವುದು ಹೆಮ್ಮೆಯ ವಿಷಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್  ಅವರು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಪಿಂಡಕೂರುತಿಮ್ಮನಹಳ್ಳಿ ಗ್ರಾಮದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪಕ್ಕದಲ್ಲಿ 100 ಆಕ್ಸಿಜನೇಟೆಡ್ ಬೆಡ್‌ಗಳ ಮೇಕ್ ಶಿಫ್ಟ್(Make Shift) ಆಸ್ಪತ್ರೆಯ ಗುದ್ದಲಿ ಪೂಜೆ ಕಾರ್ಯವನ್ನು ಮೇ‌ 31ರಂದು ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ‌ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯರಾದ ಬಿ.ಎನ್.ಬಚ್ಚೇಗೌಡ, ಶಾಸಕರಾದ ವೆಂಕಟರಮಣಯ್ಯ, ರವಿ ಅವರುಗಳ ಸಮ್ಮುಖದಲ್ಲಿ  ನೆರವೇರಿಸಿದ್ದು, ಜೂನ್ ತಿಂಗಳ ಕೊನೆಯಲ್ಲಿ ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ.

ಲೆನೆವೊ(Lenevo), ಗೋಲ್ಡ್ ಮ್ಯಾನ್ ಸ್ಯಾಚಸ್(Goldman sachs) ಕಂಪನಿಗಳು ಸಿ.ಎಸ್.ಆರ್ ನಿಧಿಯಡಿ ಒದಗಿಸಿರುವ ಅನುದಾನದಲ್ಲಿ ಮಾಡ್ಯುಲಸ್ (modulus) ಸಂಸ್ಥೆಯವರು ಸಿದ್ಧಪಡಿಸಿರುವ ವಿನ್ಯಾಸದಂತೆ ಅಂದಾಜು ರೂ. 4 ಕೋಟಿಗಳ ವೆಚ್ಚದಲ್ಲಿ ಈ ಆಸ್ಪತ್ರೆ ನಿರ್ಮಾಣವಾಗುತ್ತಿದೆ.

ರಾಜ್ಯಗಳಲ್ಲಿ ಕೋವಿಡ್ ವಿಸ್ತರಿತ ಆಸ್ಪತ್ರೆಗಳ ನಿರ್ಮಾಣಕ್ಕಾಗಿ ರಾಜ್ಯಗಳಿಗೆ ಸಹಾಯ ಮಾಡಲು ಐಐಟಿಎಂನಲ್ಲಿ ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿ ಮೂಲ ಸೌಕರ್ಯವನ್ನು ಹೆಚ್ಚಿಸುವ ಹಾಗೂ ಪೋಷಿಸುವ ಸಲುವಾಗಿ ಸರ್ಕಾರದ ಪಿಎಸ್‌ಎ ಕಚೇರಿ ಹಾಗೂ ಮಾಡ್ಯುಲಸ್ ಹೌಸಿಂಗ್ ಆರಂಭಿಕ ಹೆಜ್ಜೆಯನ್ನಿಟ್ಟಿದೆ. ಮೆಡಿಕ್ಯಾಬ್ ನಕಾರಾತ್ಮಕ ಒತ್ತಡದ ಸನ್ನಿವೇಶದಲ್ಲಿಯೂ ಕಾರ್ಯನಿರ್ವಹಣೆ ಮಾಡಲಿದ್ದು, ಅತಿ ಕಡಿಮೆ ಅವಧಿಯಲ್ಲಿ ನಿರ್ಮಾಣ ಮಾಡಿಕೊಳ್ಳಬಹುದಾಗಿದೆ. ಅಲ್ಲದೆ, ಇದು ಪೂರ್ವನಿರ್ಮಿತ ಮತ್ತು ಪೂರ್ವ ಪ್ರಾಮಾಣೀಕೃತ ರಚನೆಯಾಗಿದೆ.

ಮೆಡಿಕ್ಯಾಬ್‌ನಲ್ಲಿ ಆರೋಗ್ಯ ರಕ್ಷಕ ಕಾರ್ಯಕರ್ತರ ವಲಯ, ಸ್ಕ್ರೀನಿಂಗ್ ಮತ್ತು ವೀಕ್ಷಣಾ ವಲಯ, ಪ್ರತ್ಯೇಕ ವಾರ್ಡ್ ವಲಯ, ಐಸಿಯು ವಾರ್ಡ್ ವಲಯ ಎಂದು ನಾಲ್ಕು ವಲಯಗಳಾಗಿ ವಿಂಗಡಿಸಲಾಗಿದೆ.

ಆಸ್ಪತ್ರೆಯಲ್ಲಿರುವ ಇಲೆಕ್ಟ್ರಿಕ್  ಸೌಲಭ್ಯಗಳು: ಎಲ್‌ಇಡಿ ಲೈಟ್‌ಗಳು – 2 x 2 ಅಡಿ – 40 ವ್ಯಾಟ್ಸ್, ಕ್ಯಾಬಿನ್ ಫ್ಯಾನ್‌ಗಳು -12 ಇಂಚ್ – 80 ವ್ಯಾಟ್ಸ್, ಎಕ್ಸಾಸ್ಟ್ ಫ್ಯಾನ್‌ಗಳು – 250 ಎಂಎಂ ಸ್ವೀಪ್ – 25 ವ್ಯಾಟ್ಸ್, ಸಾಕೆಟ್‌ಗಳು ಮತ್ತು ಪ್ಲಗ್ ಪಾಯಿಂಟ್‌ಗಳು -5 ಆ್ಯಂಪ್ ಮತ್ತು 15 ಆ್ಯಂಪ್ (ವೈದ್ಯಕೀಯ ಉಪಕರಣಗಳ ಪ್ಲಗಿನ್), ವಿತರಣಾ ಬಾಕ್ಸ್ – ಸಿಂಗಲ್ ಫೇಸ್ 32 ಆ್ಯಂಪ್ – ಎಂಸಿಬಿ, ಎಸಿ ಪ್ಲಗ್ ಪಾಯಿಂಟ್‌ಗಳು – ಜೊತೆಗೆ 40 ಆ್ಯಂಪ್‌ಗಳು, ಎಸಿ ಸ್ಟೆಬಿಲೈಜರ್‌ಗಳು ಇವೆ.

ವೆಸ್ಟರ್ನ್ ಕ್ಲೋಸೆಟ್- ಪ್ರತಿ ಶೌಚಾಲಯಕ್ಕೆ ತಲಾ 1, ವಾಶ್ ಬೇಸಿನ್ – ತಲಾ 1, ಎಕ್ಸಾಸ್ಟ್ ಫ್ಯಾನ್‌ಗಳು -150 ಎಂಎಂ ಸ್ವೀಪ್, ಬಿಸಿ ಮತ್ತು ತಣ್ಣೀರು ಸೌಲಭ್ಯದ ಶವರ್ ಹೆಡ್‌ಗಳು, ಬಿಸಿ ನೀರಿನ ಗೀಸರ್ – ತಲಾ 1 ಸೇರಿದಂತೆ ಶೌಚಾಲಯಗಳು ಮತ್ತು ಕೊಳಾಯಿ ವ್ಯವಸ್ಥೆಗಳ ಸೌಲಭ್ಯಗಳು ಇಲ್ಲಿವೆ.

ನಿರ್ಮಾಣ ಸ್ಥಳದ ಅಗತ್ಯತೆಗಳು: 30 ಎಂಪಿಸಿ ಗ್ರೇಡ್‌ನೊಂದಿಗೆ ನೆಲಮಟ್ಟದಿಂದ 9 ಇಂಚಿನಷ್ಟು ಗಟ್ಟಿಯಾದ ಮಣ್ಣು ಅಥವಾ ಪಿಸಿಸಿ ಬಳಕೆ ,15 ಅಡಿ ವ್ಯಾಪ್ತಿಯೊಳಗೆ ವಿದ್ಯುತ್ ಸಂಪರ್ಕ ಸೌಲಭ್ಯ, 15 ಅಡಿ ವ್ಯಾಪ್ತಿಯೊಳಗೆ ನೀರಿನ ಸಂಪರ್ಕ ಸೌಲಭ್ಯ, ಒಳಚರಂಡಿ ವ್ಯವಸ್ಥೆಯ ಲಭ್ಯತೆ, ತೆರೆದ ಮೈದಾನ, 40 ಎಫ್‌ಟಿ ಟ್ರೈಲರ್ , 5 ಟಿ ಕ್ರೇನ್ ಸುಲಭ ಚಲನೆಗೆ ಸ್ಥಳಾವಕಾಶ.

ಈ ಆಸ್ಪತ್ರೆಯು 70 ಆಕ್ಸಿಜನ್ ಬೆಡ್‌ಗಳು, 20 ಐ.ಸಿ.ಯು (ತೀವ್ರ ನಿಗಾ ಘಟಕ) ಬೆಡ್‌ಗಳು, 10 ವೆಂಟಿಲೇಟರ್ ಬೆಡ್‌ಗಳು ಹಾಗೂ 2 ಕೆ.ಎಲ್ ಆಕ್ಸಿಜನ್ ಜನರೇಟರ್ ವ್ಯವಸ್ಥೆಯನ್ನು ಹೊಂದಿರಲಿದ್ದು, ಈ ಆಸ್ಪತ್ರೆಯ ಲೇಔಟ್ ನಿರ್ಮಾಣ ಕಾಮಗಾರಿಯನ್ನು ಇಂಡೋ ಎಂಐಎಂ ಪ್ರೈವೇಟ್ ಲಿಮಿಟೆಡ್, ದೊಡ್ಡಬಳ್ಳಾಪುರ ಇವರು ನಿರ್ವಹಿಸಿರುತ್ತಾರೆ.

ಈ ಯೋಜನೆಯ ಸಂಪೂರ್ಣ ಜವಾಬ್ದಾರಿಯನ್ನು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿ, ಭಾರತ ಸರ್ಕಾರ, ಅಮೆರಿಕನ್ ಇಂಡಿಯಾ ಫೌಂಡೇಶನ್ ಮತ್ತು ಯು.ಎನ್.ಡಿ.ಪಿ(UNDP) ಸಂಸ್ಥೆಗೆ ವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ: ನಾರಾ ಲೋಕೇಶ್‌ಗೆ ಡಿಸಿಎಂ ಡಿ.ಕೆ. ಶಿವಕುಮಾರ್

“ಮೂಲಸೌಕರ್ಯ, ಮಾನವ ಸಂಪನ್ಮೂಲ, ನವೋದ್ಯಮ, ಅನ್ವೇಷಣೆ ವಿಚಾರದಲ್ಲಿ ದೇಶದಲ್ಲಿ ಬೆಂಗಳೂರಿಗೆ ಸರಿಸಮನಾದ ನಗರ ಮತ್ತೊಂದಿಲ್ಲ. ಬೇರೆಯವರು ತಮ್ಮನ್ನು ಮಾರ್ಕೆಟಿಂಗ್ ಮಾಡಿಕೊಳ್ಳಲು ಬೆಂಗಳೂರಿನ ಬಗ್ಗೆ ಮಾತನಾಡುತ್ತಾರೆ” ಎಂದು ಆಂಧ್ರ ಐಟಿ ಸಚಿವ ನಾರಾ ಲೋಕೇಶ್ (Nara

[ccc_my_favorite_select_button post_id="115011"]

ಬೆದರಿಕೆ ಕರೆ.. Video ಪೋಸ್ಟ್ ಮಾಡಿದ ಸಚಿವ

[ccc_my_favorite_select_button post_id="115009"]

300 ರೂ. ಊಟ ಕೊಟ್ಟು 300 ಕೋಟಿ

[ccc_my_favorite_select_button post_id="114973"]

Bihar Election; ಬಿಜೆಪಿ ಪಟ್ಟಿ ಬಿಡುಗಡೆ

[ccc_my_favorite_select_button post_id="114963"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ದೊಡ್ಡಬಳ್ಳಾಪುರ: ಅರಸಮ್ಮ ದೇವಾಲಯದಲ್ಲಿ ಕಳವು

ಅರಸಮ್ಮ ದೇವಾಲಯದ (Arasamma Temple) ಬಾಗಿಲಿನ ಬೀಗ ಹೊಡೆದು ಹುಂಡಿ ಹಾಗೂ ದೇವರ ಆಭರಣಗಳನ್ನು ಕಳವು ಮಾಡಿರುವ ಪ್ರಕರಣ ಭಾನುವಾರ ರಾತ್ರಿ ನಡೆದಿದೆ.

[ccc_my_favorite_select_button post_id="114950"]
ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರದಲ್ಲಿ ಸತತ 3ನೇ ಅಪಘಾತ..! ಬೈಕ್ ಸವಾರನ ಸ್ಥಿತಿ ಗಂಭೀರ

ಮಂಗಳವಾರ ರಾತ್ರಿಯಿಂದ ಬುಧವಾರ ಬೆಳಗ್ಗೆ 9.15 ರ ವರೆಗೆ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸತತ 3ನೇ ಅಪಘಾತ (Accident) ಪ್ರಕರಣ ವರದಿಯಾಗುತ್ತಿದೆ.

[ccc_my_favorite_select_button post_id="114999"]

ಆರೋಗ್ಯ

ಸಿನಿಮಾ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಅತಿಯಾದ ಒತ್ತಡಕ್ಕೆ ಸಿಲುಕದಿರಿ

ರಾಹುಕಾಲ: 07:30AM ರಿಂದ 09:00AM, ಗುಳಿಕಕಾಲ: 01:30PM ರಿಂದ 03:00PM, ಯಮಗಂಡಕಾಲ: 10:30AM ರಿಂದ 12:00PM, Astrology

[ccc_my_favorite_select_button post_id="114397"]
error: Content is protected !!