ಬೆಂ.ಗ್ರಾ.ಜಿಲ್ಲೆ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿನ ಜೈನ್ ಸಮುದಾಯ ಅಭಿವೃದ್ಧಿ ಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಜೈನ್ ದೇವಾಲಯ(ಬಸದಿ) ನವೀಕರಣ, ದುರಸ್ಥಿ ಹಾಗೂ ಜೀರ್ಣೋದ್ಧಾರಕ್ಕಾಗಿ ಸಹಾಯಧನ ಬಿಡುಗಡೆ ಮಾಡಲು ಅರ್ಹ ನೋಂದಾಯಿತ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಂಬಂಧಿಸಿದ ಸಂಸ್ಥೆಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 216, 2ನೇ ಮಹಡಿ, ಜಿಲ್ಲಾಢಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110. ಸಲ್ಲಿಸುವುದು.
ನಿಗದಿತ ನಮೂನೆಯ ಅರ್ಜಿ ಹಾಗೂ ಇತರೆ ವಿವರಗಳನ್ನು ನಿರ್ದೇಶನಾಲಯ ವೆಬ್‌ಸೈಟ್ https://dom.karnataka.gov.in ಇಲ್ಲಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಛೇರಿ ದೂರವಾಣಿ ಸಂಖ್ಯೆ: 080-29787455 ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳ ಕಛೇರಿ, ಜಿಲ್ಲಾ ಅಥವಾ ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….