ದೊಡ್ಡಬಳ್ಳಾಪುರ: ಕೋವಿಡ್-19 ನ ಎರಡನೇ ಅಲೆಗೆ ಸಿಲುಕಿ ರಾಜ್ಯ ನಲುಗಿ ಹೋಗಿರುವಾಗ, ಸರ್ಕಾರದಲ್ಲಿ ಬಿಜೆಪಿ ನಾಯಕರು ಅಧಿಕಾರಕ್ಕಾಗಿ ಕಿತ್ತಾಟ ನಡೆಸುತ್ತಿದ್ದಾರೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ತಾಲೂಕಿನ ದರ್ಗಜೋಗಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ 45 ವರ್ಷದ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಲಸಿಕೆ ಕಾರ್ಯಕ್ಕೆ ಚಾಲನೆ ನೀಡಿ ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ರೈತರು ಮತ್ತು ಬಡವರ ಪರ ಬಿಜೆಪಿ ಸರ್ಕಾರಕ್ಕೆ ಕಾಳಜಿಯೇ ಇಲ್ಲ. ಲಾಕ್‍ಡೌನ್ ನಿಂದಾಗಿ ಮಧ್ಯಮ, ಕೆಳ ಮಧ್ಯಮ ಮತ್ತು ಬಡವರಿಗೆ ತುಂಬಾ ಕಷ್ಟವಾಗಿದೆ ಅದರ ಕಡೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂದು ಹೇಳಿದರು.
ಪಕ್ಷದ ನಾಯಕತ್ವ ವಿವಾದವನ್ನು ಬಗೆಹರಿಸಲು ಮಾತ್ರ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆಯೇ ಹೊರತು ಅಭಿವೃದ್ಧಿ ವಿಷಯಗಳನ್ನು ಚರ್ಚಿಸಲು ಅಲ್ಲ. ಇದು ರಾಜ್ಯದ ಬಗ್ಗೆ ಬಿಜೆಪಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ.
ಬೆಲೆ ಏರಿಕೆಯಿಂದ ಬಡ ಜನತೆಯ ಸ್ಥಿತಿ ದುಸ್ತರವಾಗಿದೆ, ಆದರೆ ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದು, ಕೇವಲ ಕುರ್ಚಿ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದಾರೆಯೇ ಹೊರತು ರಾಜ್ಯದ ಚಿಂತನೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಾರೆಂದು ಆರೋಪಿಸಿದರು.
ಈ ವೇಳೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದರ್ಗಜೋಗಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ನಾಗೇಶ್ ಮತ್ತಿತರರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….