ದೊಡ್ಡಬಳ್ಳಾಪುರದಲ್ಲಿ ಖಾಸಗಿ ಶಾಲಾ ಶಿಕ್ಷಕರಿಗೆ ದಿನಸಿ ಕಿಟ್ ವಿತರಣೆ

ದೊಡ್ಡಬಳ್ಳಾಪುರ: ನಗರದ ಸ್ವಾಮಿ ವಿವೇಕಾನಂದ ಶಾಲೆಯ ಹಳೆ ವಿದ್ಯಾರ್ಥಿ ಬಿ.ಸಿ.ರೇಖಾ ನೇತೃತ್ವದಲ್ಲಿ, ವಿವಿಧ ಖಾಸಗಿ ಶಾಲೆಗಳಲ್ಲಿ ಓದಿದ ಹಳೆ ವಿದ್ಯಾರ್ಥಿಗಳ ಆರ್ಥಿಕ ನೆರವಿನಿಂದ ಆಹಾರ ದಿನಸಿ ಕಿಟ್‌ಗಳನ್ನು ಖಾಸಗಿ ಶಾಲಾ ಶಿಕ್ಷಕ-ಶಿಕ್ಷಕಿಯರಿಗೆ ವಿತರಣೆ ಮಾಡಲಾಯಿತು.

ಈ ವೇಳೆ ಮಾತನಾಡಿದ  ಸ್ವಾಮಿ ವಿವೇಕಾನಂದ ಶಾಲೆಯ ಬಿ.ಸಿ.ರೇಖಾ, ಕಾರ್ಮೆಲ್ ಜ್ಯೋತಿ ಶಾಲೆ ಎಲ್.ನೇತ್ರ, ಸ್ವಾಮಿ ವಿವೇಕಾನಂದ ಶಾಲೆಯ ಎನ್.ಸೀಮಾ ಮತ್ತು ಎನ್.ಶ್ಯಾಮಲ ಹಾಗು ನನ್ನ ಆರ್ಥಿಕ ನೆರವಿನೊಂದಿಗೆ ದಿನಸಿ ಕಿಟ್ ವಿತರಣೆ ಮಾಡಿದ್ದೇವೆ. ನಮಗೆ ವಿದ್ಯೆ ನೀಡಿದ ಶಿಕ್ಷಕರಿಗೆ ಋಣ ತೀರಿಸುವಲ್ಲಿ ನಮಗೆ ಇದೊಂದು ಉತ್ತಮ  ಅವಕಾಶವಾಗಿದೆ. ಹಳೆ ವಿದ್ಯಾರ್ಥಿಗಳಾದ ನಾವು ನಮ್ಮದೆ ಹಣದಿಂದ ಒಂದು ತಿಂಗಳಿಗೆ ಆಗುವಷ್ಟು ದಿನಸಿ ಸೇರಿದಂತೆ ಅಗತ್ಯವಾದ ದಿನಸಿ ಪರಿಕರಗಳನ್ನು ನಮ್ಮ ಗುರುಗಳಿಗೆ ನೀಡಿದ್ದೇವೆ. ಈ ಮೂಲಕ ನಮಗೆ ಪಾಠ ಹೇಳಿದ ಗುರುಗಳ ನೆರವಿಗೆ ಸದಾ ಇರುತ್ತೇವೆ.

ಕರೊನಾದಿಂದ ಖಾಸಗಿ ಶಾಲಾ ಶಿಕ್ಷಕರಿಗೆ ನಿಜಕ್ಕೂ ಕಷ್ಟದ ದಿನಗಳಾಗಿವೆ. ಇಂತಹ ಸಂದರ್ಭದಲ್ಲಿ ಸರ್ಕಾರವೂ ಸ್ಪಂದಿಸುತ್ತಿಲ್ಲ, ಬಹುತೇಕ ಖಾಸಗಿ ಶಾಲೆಗಳು ಸ್ಪಂದಿಸುತ್ತಿಲ್ಲ. ಹೀಗಾಗಿ ಸರ್ಕಾರ ಇವರ ಕಡೆ ಅಗತ್ಯವಾಗಿ ಸ್ಪಂದಿಸುವುದು ಸರ್ಕಾರದ ಧರ್ಮ ಆಗಬೇಕು ಎಂದರು. 

ಗ್ರಾಮಾಂತರ ವಿಭಾಗದ ಇನ್ಸ್‌ಪೆಕ್ಟರ್ ಸತೀಶ್‌ ಮಾತನಾಡಿ, ಸಂಕಷ್ಟದ ಕಾಲದಲ್ಲಿ ಪಾಠ ಹೇಳಿದ ಗುರುಗಳ ನೆರವಿಗೆ ಬಂದಿರುವ ಹಳೆಯ ವಿದ್ಯಾರ್ಥಿಗಳ ಸೇವಾ ಪರತೆ ಮಾದರಿಯಾಗಿದೆ. ಈ ಮೂಲಕ ಉನ್ನತ ಉದ್ಯೋಗದಲ್ಲಿರುವ ಹಳೆಯ ವಿದ್ಯಾರ್ಥಿಗಳು ತಮಗೆ ಪಾಠ ಹೇಳಿದ ಶಿಕ್ಷಕರ ನೆರವಿಗೆ ಬಂದರೆ ಇಂದಿನ ಈ ಸೇವಾ ಕಾರ್ಯಕ್ಕೆ ಮತ್ತಷ್ಟು ಮಹತ್ವ ಸಿಗುತ್ತದೆ ಎಂದು ಅಭಿಪ್ರಾಯಪಟ್ಟರು. 

ಸಹಕಾರ: ಕಿಟ್ ವಿತರಣೆಗೆ ಕರವೇ ಕನ್ನಡಿಗರ ಬಣದ ದಾವಣಗೆರೆ ಜಿಲ್ಲಾಧ್ಯಕ್ಷ ಎಂ.ಸುರೇಶ್ ಹುಟ್ಟಹಬ್ಬಕ್ಕೆ ಆರ್ಥಿಕ ನೆರವು ನೀಡಿದ್ದರು. ಇದರೊಂದಿಗೆ ಕರವೇ ಕನ್ನಡಿಗರ ಬಣದ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್ ಸೇರಿದಂತೆ ಅವರ ತಂಡವೂ ಕಿಟ್ ವಿತರಣೆಗೆ ಸಹಕಾರ ನೀಡಿತ್ತು. 

ಈ ಸಂದರ್ಭದಲ್ಲಿ ಸಬ್‌ಇನ್ಸ್‌ಫೆಕ್ಟರ್ ಗೋವಿಂದ್, ಕರವೇ ಕನ್ನಡಿಗರ ಬಣದ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿ.ಎಸ್.ಚಂದ್ರಶೇಖರ್, ರಾಜ್ಯ ಪ್ರಧಾನ ಕಾರ್ಯದರ್ಶಿ ರಮೇಶ್, ತಾಲೂಕು ಗೌರವ ಅಧ್ಯಕ್ಷ ಶಿವಶಂಕರಪ್ಪ ಸೇರಿದಂತೆ ಸಂಘಟನೆಯ ಮುಖಂಡರು ಪದಾಧಿಕಾರಿಗಳು ಇದ್ದರು. 

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಭಾಷಣದಲ್ಲಿ 60 ಬಾರಿ ಕಾಂಗ್ರೆಸ್‌ ಜಪ: ಪ್ರಧಾನಿ ಮೋದಿ ವಿಡಿಯೋ ಟ್ರೋಲ್!

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ, ಕ್ಷೇತ್ರ ಮರು ವಿಂಗಡನೆ ಮಸೂದೆಗೆ ಸೋಲಾದ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ Narendra Modi) ಅವರು ನೀಡಿದ ಭಾಷಣದಲ್ಲಿ 59 ಬಾರಿ ಕಾಂಗ್ರೆಸ್‌ (Congress) ಹೆಸರು ಮಾತ್ರವೇ ಕೇಳಿಸಿದೆ

[ccc_my_favorite_select_button post_id="121182"]

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಸುಳ್ಳು ವಿಡಿಯೋ ಪೋಸ್ಟ್.. ನಟ ದುನಿಯಾ ವಿಜಯ್‌, ಭಾಸ್ಕರ್ ರಾವ್ಗೆ ಸಂಕಷ್ಟ..!

ಝಾಂಬಿ ಡ್ರಗ್ಸ್ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಮಾಹಿತಿಯ ವಿಡಿಯೊ ಶೇರ್ ಮಾಡಿದ್ದ ನಟ ದುನಿಯಾ ವಿಜಯ್‌ಗೆ (Duniya Vijay) ಸಂಕಷ್ಟ ಎದುರಾಗಿದೆ.

[ccc_my_favorite_select_button post_id="121217"]
ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ದೊಡ್ಡಬಳ್ಳಾಪುರ: ಕ್ಯಾಂಟರ್- ಟ್ರ್ಯಾಕ್ಟರ್ ನಡುವೆ ಬೆಳ್ಳಂಬೆಳಗ್ಗೆ ಅಪಘಾತ.. ಓರ್ವ ಸಾವು

ಕ್ಯಾಂಟರ್ ಹಾಗೂ ಟ್ರಾಕ್ಟರ್ ನಡುವೆ ಡಿಕ್ಕಿ (Accident) ಸಂಭವಿಸಿ, ಓರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಬಳಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ.

[ccc_my_favorite_select_button post_id="121087"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!