ಬೆಂಗಳೂರು: ಭಾರತೀಯ ಅಂಚೆ ಇಲಾಖೆಯಿಂದ ಇದೇ 21 ಜೂನ್ ರಂದು ವಿಶೇಷ ರೀತಿಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.
ಯೋಗ ದಿನದ ಅಂಗವಾಗಿ ಇದೇ ಜೂನ್ 21 ರಂದು ಪ್ರಧಾನ ಅಂಚೆ ಕಚೇರಿಗಳಲ್ಲಿ ಸ್ವೀಕೃತವಾಗುವ ಹಾಗೂ ಬಟವಾಡೆ ಆಗುವ ಎಲ್ಲಾ ಅಂಚೆ ಪತ್ರಗಳ ಮೇಲೆ ಅಂತಾರಾಷ್ಟ್ರೀಯ ಯೋಗ ದಿನದ ವಿಶೇಷ ಚಿತ್ರಾತ್ಮಕ ಮುದ್ರೆಯನ್ನು ಒತ್ತುವ ಮೂಲಕ ಸಾರ್ವಜನಿಕರಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….