ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಸೋಂಕಿನ ಎರಡನೇ ಅಲೆಯ ಲಾಕ್‌ಡೌನ್ ಹಿನ್ನಲೆಯಲ್ಲಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಅಸಂಘಟಿತ ಕಾರ್ಮಿಕರಿಗೆ ಸರ್ಕಾರವು ರೂ. 2,000/- ಆರ್ಥಿಕ ನೆರವು ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿನ ಫಲಾನುಭವಿಗಳನ್ನು ಯೋಜನೆಯ ವ್ಯಾಪ್ತಿಗೆ ತರುವ ಸಲುವಾಗಿ ತಾಲ್ಲೂಕುವಾರು ದಾಖಲೆ ಸಂಗ್ರಹಿಸುವ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ
ಅಸಂಘಟಿತ ಕಾರ್ಮಿಕರಿಂದ ದಾಖಲೆ ಸಂಗ್ರಹಿಸುವ ಶಿಬಿರವು ಜೂನ್ 22ರಂದು ದೇವನಹಳ್ಳಿಯ ಮಿನಿ ವಿಧಾನಸೌಧ ಆವರಣ, ಜೂನ್ 23ರಂದು ನೆಲಮಂಗಲದ ತಾಲ್ಲೂಕು ಕಛೇರಿ ಸಭಾಂಗಣ, ಜೂನ್ 24 ರಂದು ಹೊಸಕೋಟೆಯ ತಾಲ್ಲೂಕು ಪಂಚಾಯಿತಿ ಸಭಾಂಗಣ ಹಾಗೂ ಜೂನ್ 25 ರಂದು ದೊಡ್ಡಬಳ್ಳಾಪುರದ ಡಾ.ರಾಜ್ ಕುಮಾರ್ ಕಲಾಮಂದಿರ, ಪುರಭವನದಲ್ಲಿ ನಡೆಯಲಿದ್ದು, ನಿಗದಿತ ದಿನಗಳಂದು ಬೆಳಿಗ್ಗೆ 10:00 ಗಂಟೆಗೆ ಶಿಬಿರ ಆರಂಭಗೊಳ್ಳಲಿದೆ.
ಅಗಸರು, ಕ್ಷೌರಿಕರು, ಗೃಹಕಾರ್ಮಿಕರು, ಟೈಲರ್‌ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು ಮತ್ತು ಮಂಡಕ್ಕಿ ಭಟ್ಟಿ ಕಾರ್ಮಿಕರು ಈ 11 ವಲಯದ ಸಂಘಟನೆಗಳ ಪದಾಧಿಕಾರಿಗಳು ತಮ್ಮ ವ್ಯಾಪ್ತಿಯ ಕಾರ್ಮಿಕರ ಪಾಸ್ ಪೋರ್ಟ್ ಅಳತೆಯ ಭಾವ ಚಿತ್ರ, ಆಧಾರ್ ಕಾರ್ಡ್, ವಿಳಾಸ ದೃಢೀಕರಣ ಪತ್ರ, ಜನ್ಮ ದಿನದ ಪ್ರಮಾಣ ಪತ್ರ, ಬಿಪಿಎಲ್ ಕಾರ್ಡ್, ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಬ್ಯಾಂಕ್ ಖಾತೆ ವಿವರಗಳನ್ನು ಸಂಗ್ರಹಿಸಿ ಶಿಬಿರದಲ್ಲಿ ಭಾಗವಹಿಸುವುದು.
ಅಸಂಘಟಿತ ವಲಯದ ಕಾರ್ಮಿಕರಿಗೆ ಉದ್ಯೋಗ ಪ್ರಮಾಣಪತ್ರಗಳನ್ನು ಕಂದಾಯ ಇಲಾಖೆ, ತಾಲ್ಲೂಕು ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ನೀಡಲಾಗುವುದು.
ಪ್ರಸ್ತುತ ಜಿಲ್ಲೆಯಲ್ಲಿ ಕೊವಿಡ್-19 ಮಾರ್ಗ ಸೂಚಿಗಳು ಜಾರಿಯಲ್ಲಿರುವುದರಿಂದ ಸಂಘಟನೆಗಳ ಪದಾಧಿಕಾರಿಗಳು ಮಾತ್ರ ಶಿಬಿರದಲ್ಲಿ ಪಾಲ್ಗೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಪ್ರದೀಪ್ ಮೊ.ಸಂ.:9008185345, ಹೊಸಕೋಟೆ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಸುರೇಶ್ ಮೊ.ಸಂ.: 8861697777, ದೇವನಹಳ್ಳಿ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ಅಂಬಿಕಾ ಮೊ.ಸಂ.: 9620616539, ನೆಲಮಂಗಲ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರಾದ ನಾಗರತ್ನ ಮೊ.ಸಂ.:9845219009 ಇವರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….