ಲಾಕ್​ಡೌನ್​: 16 ಜಿಲ್ಲೆಗಳಿಗೆ ಮತ್ತಷ್ಟು ರಿಲೀಫ್.. ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ….?

ಬೆಂಗಳೂರು: ಕರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆ ಹಂತ ಹಂತವಾಗಿ ಅನ್‍ಲಾಕ್ ಮಾಡಲಾಗುತ್ತಿದ್ದು, ಇಂದು ರಾಜ್ಯದ 16 ಜಿಲ್ಲೆಗಳಲ್ಲಿ ಮತ್ತಷ್ಟು ನಿಯಮ ಸಡಿಲಿಕೆ ಮಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ಈ ಕುರಿತು ಇಂದು ಸಂಜೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಸಿಟಿವಿಟಿ ದರದ ಆಧಾರದ ಮೇಲೆ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಹಾಗೂ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಅನ್‍ಲಾಕ್ ಮಾಡಲಾಗುತ್ತಿದೆ. ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿಬಿಎಂಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಸಂಜೆ 5 ಗಂಟೆಯವರೆಗೆ ಸಡಿಲಿಕೆ ನೀಡಲಾಗಿದೆ.

ಈ ಜಿಲ್ಲೆಗಳಲ್ಲಿ ಎಲ್ಲ ಅಂಗಡಿಗಳನ್ನು ಬೆಳಗ್ಗೆ 5 ರಿಂದ ಸಂಜೆ 5 ಗಂಟೆಯವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ಎಸಿ ಹಾಕದೇ ಹೋಟೆಲ್, ಕ್ಲಬ್ಸ್, ರೆಸ್ಟೋರೆಂಟ್‍ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5 ಗಂಟೆಯವರೆಗೆ ಶೇ.50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ಬಸ್ ಮತ್ತು ಮೆಟ್ರೋದಲ್ಲಿ ಶೇ.50 ಸಾಮರ್ಥ್ಯದೊಂದಿಗೆ ಪ್ರಯಾಣಿಸಬಹುದು. ಹೊರಾಂಗಣ ಕ್ರೀಡೆಗಳಿಗೆ ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ. ಸರ್ಕಾರಿ, ಖಾಸಗಿ ಕಚೇರಿಗಳಿಗೆ ಶೇ.50ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ. ಲಾಡ್ಜ್, ರೆಸಾರ್ಟ್, ಜಿಮ್ ಗಳಲ್ಲಿ ಶೇ.50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ.5ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜೂನ್ 11ರ ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಶೇ.10ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುತ್ತವೆ. ಅಲ್ಲದೆ ರಾಜ್ಯವ್ಯಾಪಿ ಅನ್ವಯವಾಗುವಂತೆ ಪ್ರತಿ ದಿನ ರಾತ್ರಿ 7 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಬಸ್ ಸಂಚಾರ ಶೇ.50ರಷ್ಟು ಪ್ರಯಾಣಿಕರಿಗೆ ಮಿತಿಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]