ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಹಾಗೂ ಪ್ರವರ್ಗ ಸಿ ವರ್ಗದ ದೇವಾಲಯಗಳಲ್ಲಿ ವ್ಯವಸ್ಥಾಪನ ಸಮಿತಿ ರಚಿಸುವುದರ ಮೂಲಕ ದೇವಾಲಯಗಳ ಜೀರ್ಣೋದ್ಧಾರ ಹಾಗೂ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳ ಕಾಯ್ದೆ ಅನ್ವಯ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯ ಧಾರ್ಮಿಕ ಪರಿಷತ್ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ನ ಸಲಹೆಯಂತೆ ಅಧಿಕಾರಿಗಳು ದೇವಾಲಯಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ತಿಳಿಸಿದರು.
ರಾಜ್ಯ ಧಾರ್ಮಿಕ ಪರಿಷತ್ ನ ಸದಸ್ಯ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ನ ಉಸ್ತುವಾರಿ ಡಾ.ಮಹರ್ಷಿ ಆನಂದ ಗುರೂಜಿ ಅವರು ಮಾತನಾಡಿ, ಅಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿರುವ ದೇವಾಲಯಗಳಿಗೆ ಪ್ರವಾಸ ಮಾಡುವ ಮೂಲಕ ಅವುಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಬೇಕು ಎಂದರಲ್ಲದೆ, ದೇವಾಲಯಗಳ ವ್ಯವಸ್ಥಾಪನಾ ಸದಸ್ಯರು ಹಾಗೂ ಅಧಿಕಾರಿಗಳು ಸಹಕಾರ ಮನೋಭಾವದಿಂದ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಮುಜರಾಯಿ ಇಲಾಖೆಯ ಸಹಾಯಕ ಆಯುಕ್ತ ಎನ್.ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಶೀಲ್ದಾರ್ ಹೇಮಲತಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..