ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 140 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಹೊಸದಾಗಿ 111 ಕರೊನಾ ಪ್ರಕರಣಗಳು ಪ್ರಕರಣಗಳು ಭಾನುವಾರ ವರದಿಯಾಗಿದೆ.
ಬುಲೆಟಿನ್ ವರದಿಯನ್ವಯ ದೊಡ್ಡಬಳ್ಳಾಪುರ ತಾಲೂಕಿನ 20 ಪುರುಷರು, 21 ಮಂದಿ ಮಹಿಳೆಯರು ಸೇರಿ 41. ಹೊಸಕೋಟೆ ತಾಲೂಕಿನ 19 ಪುರುಷರು, 07 ಮಹಿಳೆಯರು ಸೇರಿ 26. ದೇವನಹಳ್ಳಿ ತಾಲೂಕಿನ 11 ಪುರುಷರು, 12 ಮಹಿಳೆಯರು ಸೇರಿ 23 ಹಾಗೂ ನೆಲಮಂಗಲ ತಾಲೂಕಿನ 12 ಪುರುಷರು, 05 ಮಹಿಳೆಯರು ಸೇರಿ 17 ಮತ್ತು ಅನ್ಯ ಜಿಲ್ಲೆಯವರು ಸೇರಿ ಒಟ್ಟು ಜಿಲ್ಲೆಯಲ್ಲಿ 111 ಜನರಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.
ಪ್ರಸ್ತುತ ಜಿಲ್ಲೆಯಲ್ಲಿ 475 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2861ಕ್ಕೆ ಇಳಿಕೆಯಾಗಿದೆ. ಅಲ್ಲದೆ 15417 ಮಂದಿಯನ್ನು ಕಡ್ಡಾಯ ಗೃಹ ಬಂಧನದಲ್ಲಿ ಇಡಲಾಗಿದೆ.
ಇಂದಿನ ವರದಿಯ ಪ್ರಕಾರ 2852 ಮಂದಿಯ ಮಂದಿಯ ಫಲಿತಾಂಶ ಬಾಕಿ ಉಳಿದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..