ದೊಡ್ಡಬಳ್ಳಾಪುರ: ಕೋವಿಡ್ ಹಿನ್ನೆಲೆಯಲ್ಲಿ 54 ದಿನಗಳ ಬಳಿಕ ಸಾರಿಗೆ ಬಸ್ ಸಂಚಾರ ಆರಂಭವಾಗಿದೆ. ಇಂದಿನಿಂದ ಬಿಎಂಟಿಸಿ, ಕೆಎಸ್‍ಆರ್‍ಟಿಸಿ ಬಸ್ ಸೇವೆ ಪುನರ್ ಆರಂಭವಾಗಿದೆ.
ನಗರದ ಡಿಪೋದಿಂದ ಇದುವರೆಗೂ ಹನ್ನೆರಡು ಬಸ್ಸುಗಳು ರಸ್ತೆಗಿಳಿದಿದ್ದು, ಪ್ರಯಾಣಿಕರ ಅಗತ್ಯತೆಯ ಮೇರೆಗೆ ಹೆಚ್ಚಿಸುವುದು ಅಥವಾ ಕಡಿಮೆ ಮಾಡುವ ಕುರಿತು ಚಿಂತಿಸಲಾಗುವುದು ಎಂದು ಡಿಪೋ ವ್ಯವಸ್ಥಾಪಕ ಆನಂದ್ ಹರಿತಲೇಖನಿಗೆ ತಿಳಿಸಿದ್ದಾರೆ.
ಬೆಳಗ್ಗೆ 6ರಿಂದ ಬಸ್ ಸಂಚಾರ ಆರಂಭವಾಗಿದ್ದು, ಬೆಂಗಳೂರು, ತುಮಕೂರು, ನೆಲಮಂಗಲ, ಚಿಕ್ಕಬಳ್ಳಾಪುರ ಮತ್ತಿತರ ಕಡೆಗೆ ಸಂಜೆ 7 ಗಂಟೆಯವರೆಗೆ ಬಸ್ ಸಂಚಾರ ನಡೆಸಲಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..