ಬೆಂ.ಗ್ರಾ.ಜಿಲ್ಲೆ: ಲಾಕ್‍ಡೌನ್ ಕಾರಣ ಸಮಸ್ಯೆಗೆ ಒಳಗಾಗಿರುವ ಆಶಾ,ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ವಿಶೇಷ ಚೇತನರಿಗೆ ಉಚಿತ ದಿನಸಿ ಕಿಟ್ ವಿತರಿಸುವ ಮೂಲಕ ಜಿಲ್ಲೆಯ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮಪಂಚಾಯಿತಿ ಗಮನ ಸೆಳೆದಿದೆ.
ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಆರ್.ಲೋಕೇಶ್ ಅಧ್ಯಕ್ಷೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಡಿ.ಬಿ.ಶಂಕರ್ ಗೋಡೌನ್ ಅವರ ನೆರವಿನೊಂದಿಗೆ 300 ಮಂದಿಗೆ, ಸುಮಾರು ಒಂದು ಸಾವಿರ ಮೌಲ್ಯದ ದಿನಸಿ ಕಿಟ್ ವಿತರಿಸಿ ಲಾಕ್‍ಡೌನ್ ಕಾರಣ ನೆರವು ನೀಡಲಾಯಿತು.
ಈ ಸಂದರ್ಭದಲ್ಲಿ ನೆಲಮಂಗಲ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್ ಕುಮಾರ್, ಸಹಾಯಕ ನಿರ್ದೇಶಕ ಪದ್ಮನಾಭ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನೇತ್ರಾವತಿ, ಪಿಡಿಒ ಸಿ.ಗೀತಾ ಮಣಿ, ಡಿ.ಬಿ.ಶಂಕರ್ ಗೋಡೌನ್ ನ ಮಾಲೀಕ ರಘು, ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.
ಇದೇ ವೇಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ವಿಶೇಷ ಚೇತನರಿಗೆ ಕೋವಿಡ್-19 ಲಸಿಕಾ ಅಭಿಯಾನ ನಡೆಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..