ಬೆಂ.ಗ್ರಾ.ಜಿಲ್ಲೆ: ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 24 ರ ಅಡಿಯಲ್ಲಿ ರಾಜ್ಯ ಕಾರ್ಯಕಾರಿ ಸಮಿತಿಯು 2021ರ ಜೂನ್ 20 ರಂತೆ ಜಿಲ್ಲೆಗಳ ಸಾಪ್ತಾಹಿಕ ಚಲಿಸುವ ಸರಾಸರಿ ಸಕಾರಾತ್ಮಕ ದರವನ್ನು ಪರಿಗಣಿಸಿದ ನಂತರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣದ ಪಾಸಿಟಿವಿಟಿ ದರದ ಸ್ಥಿರವಾಗಿ ಕ್ಷೀಣಿಸುತ್ತಿರುವ ಹಿನ್ನೆಲೆ, ಜುಲೈ 5ರ ಬೆಳಿಗ್ಗೆ 5.00 ಗಂಟೆಯವರೆಗೆ ಎಲ್ಲಾ ಹೆಚ್ಚುವರಿ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಅನುಮತಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ಕೋವಿಡ್ ಪ್ರಕರಣದ ಪಾಸಿಟಿವಿಟಿ ದರದ ಸ್ಥಿರವಾಗಿ ಕ್ಷೀಣಿಸುತ್ತಿರುವ ಕೆಲವು ಜಿಲ್ಲೆಗಳನ್ನು ವರ್ಗ 1ರ ಜಿಲ್ಲೆಗಳೆಂದು ಪರಿಗಣಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಇದೇ ವರ್ಗದಲ್ಲಿ ಬರುವುದರಿಂದ ಜೂನ್ 19 ಮತ್ತು 20ರಂದು ಅನುಮತಿಸಲಾದ ಎಲ್ಲಾ ಹೆಚ್ಚುವರಿ ಚಟುವಟಿಕೆಗಳು ಅನ್ವಯವಾಗಲಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..