ಮೆಗಾ ಲಸಿಕೆ ಅಭಿಯಾನ: ಕರ್ನಾಟಕದಲ್ಲಿ 11 ಲಕ್ಷದಷ್ಟು ಮಂದಿಗೆ ಲಸಿಕೆ / ದಾಖಲೆ ಬರೆದ ದೊಡ್ಡಬಳ್ಳಾಪುರ / ಬೆಂ.ಗ್ರಾ.ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು / ದೊಡ್ಡಬಳ್ಳಾಪುರ: ದೇಶಾದ್ಯಂತ ಸೋಮವಾರ ಆರಂಭವಾದ ಮೆಗಾ ಲಸಿಕೆ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದ್ದು, 80 ಲಕ್ಷಕ್ಕೂ ಹೆಚ್ಚು ಮಂದಿ ಒಂದೇ ದಿನ ಲಸಿಕೆ ಪಡೆದಿದ್ದಾರೆ.

ಇದೇ ಮೊದಲ ಬಾರಿಗೆ ವಿಶ್ವದಲ್ಲಿ ಒಂದೇ ದಿನ ಇಷ್ಟು ಬೃಹತ್‌ ಪ್ರಮಾಣದಲ್ಲಿ ಲಸಿಕೆ ಹಾಕಿದ ದಾಖಲೆಯನ್ನೂ ಭಾರತ ನಿರ್ಮಾಣ ಮಾಡಿದ್ದರೆ, ಕರ್ನಾಟಕದಲ್ಲಿ 11 ಲಕ್ಷದಷ್ಟು ಮಂದಿ ಲಸಿಕೆ ಪಡೆದು ದಾಖಲೆ ನಿರ್ಮಿಸಿದ್ದಾರೆ.

ರಾಜ್ಯದಲ್ಲಿ 10.7 ಲಕ್ಷ ಮಂದಿಗೆ ಲಸಿಕೆ: ರಾಜ್ಯದಲ್ಲಿ 18 ರಿಂದ 44 ವರ್ಷದ ಏಳು ಲಕ್ಷ ಮಂದಿಯ ಸಹಿತ 10.7 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ. ಸಾಮಾನ್ಯ ದಿನಗಳಿಗೆ ಹೋಲಿಸಿದರೆ ನಾಲ್ಕು ಪಟ್ಟು ಅಧಿಕ ಲಸಿಕೆ ವಿತರಣೆ ಮಾಡಲಾಗಿದೆ.

ಬೆಂಗಳೂರು ಪ್ರಥಮ: ದೇಶದಲ್ಲಿ ಅತೀ ಹೆಚ್ಚು ಮಂದಿ ಲಸಿಕೆ ಪಡೆದ ನಗರವಾಗಿ ಬೆಂಗಳೂರು ಗುರುತಿಸಿ ಕೊಂಡಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್‌ ತಿಳಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಮಧ್ಯ ಪ್ರದೇಶದ ಇಂದೋರ್‌ ಇದೆ. ಬೆಂಗಳೂರಿನಲ್ಲಿ ಸೋಮವಾರ 2.13 ಲಕ್ಷ ಮಂದಿ ಲಸಿಕೆ ಪಡೆದರೆ ಇಂದೋರ್‌ ನಲ್ಲಿ 2.11 ಲಕ್ಷ ಮಂದಿ ಲಸಿಕೆ ಪಡೆದಿದ್ದಾರೆ. ರಾಜ್ಯಗಳ ಪೈಕಿ ಮಧ್ಯಪ್ರದೇಶ 15.5 ಲಕ್ಷ ಮಂದಿಗೆ ಲಸಿಕೆ ನೀಡಿ ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ.

ದೊಡ್ಡಬಳ್ಳಾಪುರದಲ್ಲಿ ದಾಖಲೆ: ಮೆಗಾ ಲಸಿಕೆ ಅಭಿಯಾನಕ್ಕೆ ತಾಲೂಕಿನಲ್ಲಿ ಅಭೂತಪೂರ್ವ ಬೆಂಬಲ ದೊರೆತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮೊದಲ ಸ್ಥಾನ ಪಡೆದಿದೆ.

ದೊಡ್ಡಬಳ್ಳಾಪುರದಲ್ಲಿ ಒಂದೇ ದಿನ ಅತಿ ಹೆಚ್ಚು 6287 ಮಂದಿ ಲಸಿಕೆ ಪಡೆದರೆ, ಜಿಲ್ಲೆಯ ಇತರೆ ತಾಲೂಕುಗಳಾದ ದೇವನಹಳ್ಳಿ 6053, ನೆಲಮಂಗಲ 5041 ಹಾಗೂ ಹೊಸಕೋಟೆಯಲ್ಲಿ 5004 ಮಂದಿ ಸೇರಿ ಒಟ್ಟು 22385 ಲಸಿಕೆ ಪಡೆದಿದ್ದಾರೆ.

ಲಸಿಕೆ ಕಾರ್ಯ: ನಗರದ ತಾಯಿ ಮಗು ಆರೋಗ್ಯ ಕೇಂದ್ರ, ಆಯುರ್ವೇದಿಕ್ ಆಸ್ಪತ್ರೆ, ಹಳೇ ಬಸ್ ಸ್ಟ್ಯಾಂಡ್ ಸರ್ಕಾರಿ ಆಸ್ಪತ್ರೆ, ಗ್ರಾಮಾಂತರ ಪ್ರದೇಶದ ಕನಸವಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಆರೂಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡಹೆಜ್ಜಾಜಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಕ್ಕರೆಗೊಲ್ಲಹಳ್ಳಿ ಪ್ರಾಥಮಿಕ   ಆರೋಗ್ಯ ಕೇಂದ್ರ, ಸಾಸಲು ಪ್ರಾಥಮಿಕ ಆರೋಗ್ಯ ಕೇಂದ್ರ, ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ದೊಡ್ಡತುಮಕೂರು ಪ್ರಾಥಮಿಕ ಆರೋಗ್ಯ ಕೇಂದ್ರ, S.S ಘಾಟಿ ಪ್ರಾಥಮಿಕ ಆರೋಗ್ಯ ಕೇಂದ್ರ, ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಮೆಳೆಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ದೊಡ್ಡಬಳ್ಳಾಪುರ: ಲಕ್ಷ್ಮೀಪತಯ್ಯರ ಸ್ವಗೃಹಕ್ಕೆ ಹರೀಶ್ ಗೌಡ ಭೇಟಿ.. JDS ರಜತ ಮಹೋತ್ಸವಕ್ಕೆ ಆಹ್ವಾನ

ಇದೇ ತಿಂಗಳ 8 ರಂದು ನಡೆಯಲಿರುವ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ ಹರೀಶ್ ಗೌಡ (Garish Gowda) ಅವರು ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರ ಭೇಟಿ

[ccc_my_favorite_select_button post_id="121740"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]