ರಂಗ ಶಿಕ್ಷಣವೂ ಅಂಕಗಳಿಕೆಯ ಪದ್ದತಿಗೆ ಒಳಪಟ್ಟಾಗಲೇ ಅದರ ಪ್ರಾಮುಖ್ಯತೆ ಹೆಚ್ಚಾಗಲು ಸಾಧ್ಯ: ಟಿ.ಎಸ್‌.ನಾಗಾಭರಣ

ಬೆಂಗಳೂರು: ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎಂದು ಹಿರಿಯ ರಂಗಕರ್ಮಿ ಹಾಗೂ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್‌ ನಾಗಾಭರಣ ಅಭಿಪ್ರಾಯಪಟ್ಟರು. 

ವೆಬಿನಾರ್‌ ಮೂಲಕ ಕಾಲೇಜು ಶಿಕ್ಷಣ ಇಲಾಖೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಸುರಾನಾ ಕಾಲೇಜು ಸಂಯುಕ್ತಾಶ್ರಯದಲ್ಲಿ ಹಾಗೂ ಎರಡೂ ಕಾಲೇಜುಗಳ ಐ.ಕ್ಯೂ.ಎ.ಸಿ ಸಮಿತಿಯ ಸಹಕಾರ ಮತ್ತು ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಪ್ರದರ್ಶನ ಕಲಾ ವಿಭಾಗ ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಪದವಿ ತರಗತಿಗಳಲ್ಲಿ ರಂಗ ಶಿಕ್ಷಣದ ಮಹತ್ವ (ನಾಟಕ ಪಠ್ಯ – ಪ್ರದರ್ಶನ – ಭೋಧನೆ) ಏಳು ದಿನಗಳ ರಾಷ್ಟಮಟ್ಟದ ಎಫ್‌ಡಿಪಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಪದವಿ ಶಿಕ್ಷಣದಲ್ಲಿ ಅನ್ವಯಿಕ ರಂಗಪ್ರಕಾರವನ್ನು ಅಳವಡಿಸಿಕೊಳ್ಳುವ ಬಗ್ಗೆ ಹೆಚ್ಚಿನ ಚರ್ಚೆ ನಡೆಯಬೇಕಾಗಿದೆ. ಏಕೆಂದರೆ ರಂಗಶಿಕ್ಷಣವನ್ನು ನಾವು ಶಿಕ್ಷಣದ ಶಿಸ್ತಿಗೆ ಅಳವಡಿಸಿಕೊಳ್ಳಬೇಕಾದರೆ ಅದು ಅಗತ್ಯವಾಗಿದೆ. ಆದ್ಯತೆಯ ಶಿಕ್ಷಣ ಪದ್ದತಿಯಲ್ಲಿ ಬೌದ್ದಿಕ ಗ್ರಹಿಕೆಯ ಹೆಚ್ಚಾಗಲು ಇಂತಹ ವಿಷಯಗಳ ಪಠಣ ಅವಶ್ಯಕವಾಗಿದೆ. ರಂಗಭೂಮಿ ಎಂದರೆ ಕೇವಲ ಚಳುವಳಿ ಎಂದಲ್ಲ. ಅದೊಂದು ಪ್ರಭೇದ ಅಷ್ಟೇ. ಆದರೆ, ಮನೋವಿಕಾಸ ಎನ್ನುವುದು ಮತ್ತು ಸಾಂಸ್ಕೃತಿಕ ವಲಯದ ಸೃಷ್ಟಿ ಬಹಳ ದೊಡ್ಡ ಕರ್ತವ್ಯವಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಬರುವ ಹತ್ತು ಹಲವು ಯೋಜನೆಗಳನ್ನು ಅರ್ಥಮಾಡಿಕೊಳ್ಳುವುದು ಬಹಳ ಅಗತ್ಯವಿದೆ. ಅದರಲ್ಲಿ ಏಕರೂಪ ಪಠ್ಯಕ್ರಮ ಇಲ್ಲ. ಸೃಜನಾತ್ಮಕತೆ ಇದೆ, ಭಿನ್ನತೆ ಇದೆ ಅಲ್ಲದೆ ಹೊಸತನದ ಹಾದಿಯನ್ನು ಕಂಡುಕೊಳ್ಳಲು ಅವಕಾಶ ಇದೆ. ಭಾಷೆಯನ್ನು ಬೆಳೆಸುವ ಬಗ್ಗೆ, ಭಾಷೆಯ ನಿರಂತರತೆಯನ್ನು ಕಾಪಾಡುವಲ್ಲಿ, ಸಂಸ್ಕೃತಿಯ ಬೇರುಗಳನ್ನು ಗಟ್ಟಿಗೊಳಿಸುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡಲು ರಂಗಶಿಕ್ಷಣ ಪ್ರಮುಖ ಪಾತ್ರವಹಿಸಲಿದೆ. ಅಲ್ಲದೆ, ಪದವಿ ತರಗತಿಗಳಲ್ಲಿ ರಂಗಶಿಕ್ಷಣದ ಶೈಕ್ಷಣಿಕ ಮಹತ್ವ ಬಹಳ ಹೆಚ್ಚಾಗಿದೆ. ಆದರೆ ಇದಕ್ಕೆ ಹೆಚ್ಚಿನ ಪ್ರಾಮುಖ್ಯತೆ ದೊರೆಯಬೇಕಾದರೆ ಅದನ್ನು ಅಂಕಗಳಿಕೆಯ ಪದ್ದತಿಗೆ ಅಳವಡಿಸುವುದು ಅಗತ್ಯ ಎನ್ನುವುದು ನಮ್ಮ ಒತ್ತಾಯವಾಗಿದೆ ಎಂದು ಹೇಳಿದರು.

ಕರ್ನಾಟಕ ನಾಟಕ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷರಾದ ಜೆ. ಲೋಕೇಶ್‌ ಮಾತನಾಡಿ, ಪದವಿ ತರಗತಿಗಳಲ್ಲಿ ಯಾವ ರೀತಿಯ ನಾಟಕಗಳನ್ನು ಪಠ್ಯಪುಸ್ತಕಗಳನ್ನು ಅಳವಡಿಸಬೇಕು ಎನ್ನುವುದಕ್ಕೆ ಸಮಿತಿಗಳು ಹೆಚ್ಚಿನ ಒತ್ತು ನೀಡಬೇಕು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಅನುವು ಮಾಡಿಕೊಡುವಂತಹ ರಂಗ ಚಟುವಟಿಕೆಗಳು ಪಠ್ಯದಲ್ಲಿ ಅಳವಡಿಕೆಯಾಗಬೇಕು. ಅಲ್ಲದೆ, ಆ ಚಟುವಟಿಕೆಗಳನ್ನು ಅಂಕಗಳಿಕೆಯ ಪರಿಧಿಯಲ್ಲಿ ತಂದಲ್ಲಿ ಜನರು ಅದರಲ್ಲಿ ತೊಡಗಿಕೊಳ್ಳುತ್ತಾರೆ ಎಂದು ಅಬಿಪ್ರಾಯಪಟ್ಟರು. 

ಕಾರ್ಯಕ್ರಮದ ನಿರ್ವಹಣೆಯನ್ನು ಸಂಯೋಜಕರಾದ ಸುರಾನಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ವತ್ಸಲಾ ಮೋಹನ್‌ ನಡೆಸಿಕೊಟ್ಟರು. ಡಾ. ರಾಜಶೇಖರಯ್ಯ ಮಠಪತಿ, ಸಹಾಯಕ ಪ್ರಧ್ಯಾಪಕರು ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರ, ಬೆಂ.ವಿ.ವಿ ಜ್ಞಾನಭಾರತಿ ಕಲಾವಿಭಾಗದ ನಿರ್ದೇಶಕ ಪ್ರದರ್ಶನ, ಡಾ ಹಂಸಿನಿ ನಾಗೇಂದ್ರ. ಸುರಾನಾ ಕಾಲೇಜು ಸೌತ್‌ ಎಂಡ್‌ ರಸ್ತೆ ಪ್ರಾಂಶುಪಾಲೆ ಡಾ ಭವಾನಿ ಎಂ ಆರ್‌, ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಜಯನಗರದ ಪ್ರಾಂಶುಪಾಲರಾದ ಡಾ ಬಿ ಚಂದ್ರಶೇಖರ್‌, ಕಾರ್ಯಕ್ರಮ ಸಂಯೋಜಕರಲ್ಲೊಬ್ಬರಾದ ಡಾ. ಬಿ.ಆರ್‌. ರಘುನಂದನ್‌ (ಬೇಲೂರು ರಘುನಂದನ್) ವಂದನಾರ್ಪಣೆ ಮಾಡಿದರು. ರಾಜ್ಯ ಮತ್ತು ದೇಶಧ ವಿವಿಧ ಭಾಗಗಳ ಪ್ರಾಧ್ಯಾಪಕರುಗಳು,ರಂಗಾಸಕ್ತರು, ರಂಗನಟರು, ರಂಗಕರ್ಮಿಗಳು ಪಾಲ್ಗೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ. ಪಾಟೀಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಫೆನ್ಸ್ ಕಾರಿಡಾರ್ ಸಂಬಂಧ ಸದ್ಯದಲ್ಲೇ ಪ್ರಧಾನಿ ಭೇಟಿ: ಎಂ.ಬಿ.

ಬೆಂಗಳೂರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ: ಎಂ.ಬಿ. ಪಾಟೀಲ (M.B. Patila)

[ccc_my_favorite_select_button post_id="110949"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ದೊಡ್ಡಬಳ್ಳಾಪುರ: ಲಾರಿ ಡಿಕ್ಕಿ ಪ್ರಕರಣ.. ಮೃತ ವೃದ್ಧನ ಗುರುತು ಪತ್ತೆ..!

ರಸ್ತೆ ದಾಟುವ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವೃದ್ಧನೋರ್ವ ಸಾವನಪ್ಪಿರುವ ಘಟನೆ (Accident) ಡಿಕ್ರಾಸ್ ಬಳಿ ಸಂಭವಿಸಿದೆ.

[ccc_my_favorite_select_button post_id="110927"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!