ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಎಸ್.ಎಸ್.ಘಾಟಿಯಲ್ಲಿರುವ ಗೋಶಾಲೆಯ ಸಮೀಪ ರೂ.4 ಕೋಟಿ ವೆಚ್ಚದಲ್ಲಿ ವಿಶ್ವೇಶ್ವರಯ್ಯ ಪಿಕ್ ಅಪ್ ಡ್ಯಾಂಗೆ ಮೋರಿ ಹಾಗೂ ಸೇತುವೆ ಕಾಮಗಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ತಾಲ್ಲೂಕು ಪಂಚಾಯಿತಿ ಇಒ ಮುರುಡಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……