ಸಾಂಕ್ರಾಮಿಕ ರೋಗಗಳು ಹರಡದಂತೆ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ. ಜಗದೀಶ.ಕೆ.ನಾಯಕ

ಬೆಂ.ಗ್ರಾ.ಜಿಲ್ಲೆ: ಮಳೆಗಾಲ ಆರಂಭವಾಗಿದ್ದು, ಜಿಲ್ಲೆಯಲ್ಲಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆಯು ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳ ಸಹಕಾರದೊಂದಿಗೆ ಬೀದಿ ನಾಟಕ, ಆಟೋ ಪ್ರಚಾರ ಹಾಗೂ ಕರಪತ್ರಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ .ಕೆ.ನಾಯಕ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ನಡೆದ “ಮಲೇರಿಯಾ ವಿರೋಧಿ ಮಾಸಾಚರಣೆ 2021ರ ಅಂಗವಾಗಿ ವಿವಿಧ ಇಲಾಖೆಗಳ ಸಮನ್ವಯ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು. 

ಜಿಲ್ಲೆಯಲ್ಲಿ ಮಲೇರಿಯಾ ಹಾಗೂ ಡೆಂಗ್ಯೂ ಪ್ರಕರಣಗಳು ಇರುವ ಸ್ಥಳಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಬೇಕು ಜೊತೆಗೆ ಜನರಲ್ಲಿ ಅರಿವು ಮೂಡಿಸಬೇಕು ಎಂದರು. 

ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಕಾರ್ಮಿಕರು ಹಂತ ಹಂತವಾಗಿ ಜಿಲ್ಲೆಗೆ ಆಗಮಿಸಲಿದ್ದು, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಂತಹ ಕಾರ್ಮಿಕರನ್ನು ಗುರುತಿಸಿ ಅವರ ಆರೋಗ್ಯ ತಪಾಸಣೆ ಮಾಡಬೇಕು ಹಾಗೂ ಅವರಲ್ಲಿ ರೋಗದ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸುವುದರಿಂದ ಮಲೇರಿಯಾ ಹರಡದಂತೆ ತಡೆಗಟ್ಟಬಹುದು ಎಂದು ತಿಳಿಸಿದರು. 

ನಗರಸಭೆ, ಪುರಸಭೆ ಹಾಗೂ ಗ್ರಾಮ ಪಂಚಾಯಿತಿಗಳು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರಲ್ಲದೆ, ಮಳೆಗಾಲ ಪ್ರಾರಂಭವಾಗಿದ್ದು, ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಬೇಕು ಹಾಗೂ ನಿಂತ ನೀರಿನಲ್ಲಿ ಸೊಳ್ಳೆಗಳು ಹೆಚ್ಚಾಗಿ ಉತ್ಪತ್ತಿಯಾಗುವುದರಿಂದ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸ್ವಚ್ಛತೆಗೆ ಆದ್ಯತೆ ನೀಡುವಂತೆ ಸೂಚಿಸಿದರು. 

ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯ ಕುರಿತು ಆಟೋ ಪ್ರಚಾರ ಮಾಡಲು ಸೂಚಿಸಲಾಗಿದ್ದು, ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ನಗರಸಭೆಯ ಕಸ ಸಂಗ್ರಹ ವಾಹನಗಳಲ್ಲಿ ಈ ಕುರಿತು ರೋಗ ಹರಡದಂತೆ ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಗತ್ಯ ಪ್ರಚಾರ ಕೈಗೊಳ್ಳುವಂತೆ ಸೂಚಿಸಿದರು. 

ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಪ್ಪೇಸ್ವಾಮಿ ಅವರು ಮಾತನಾಡಿ, ಇನ್ನು ಕೆಲವು ದಿನಗಳಲ್ಲಿ ಶಾಲಾ-ಕಾಲೇಜುಗಳು  ಪ್ರಾರಂಭವಾಗಲಿದ್ದು, ಶಾಲೆಯ ಸುತ್ತಮುತ್ತ ಸ್ವಚ್ಛತೆಗೆ ಗಮನ ಹರಿಸಬೇಕು ಎಂದರಲ್ಲದೆ, ಮಲೇರಿಯಾ, ಡೆಂಗ್ಯೂ ಹಾಗೂ ಚಿಕನ್ ಗುನ್ಯದಂತಹ ರೋಗ ಹರಡುವ ಸೊಳ್ಳೆಗಳು ಹಗಲಿನ ವೇಳೆಯಲ್ಲಿ ಚಟುವಟಿಕೆ ನಡೆಸುವುದರಿಂದ  ವಿದ್ಯಾರ್ಥಿಗಳಿಗೆ ರೋಗ ಹರಡುವ ಸಾಧ್ಯತೆ ಇರುವುದರಿಂದ ವಿದ್ಯಾರ್ಥಿಗಳಿಗೆ ಈ ಕುರಿತು ಆನ್‌ಲೈನ್ ತರಗತಿ ವೇಳೆ ಅರಿವು ಮೂಡಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಧರ್ಮೇಂದ್ರ, ಹಿರಿಯ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ತಾಲ್ಲೂಕು ವೈದ್ಯಾಧಿಕಾರಿಗಳು, ತಾಲ್ಲೂಕು ಕಾರ್ಯನಿರ್ವಾಹಣಾ ಅಧಿಕಾರಿಗಳು, ನಗರಸಭೆ ಹಾಗೂ ಪುರಸಭೆಗಳ ಮುಖ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಸರಣಿ ಹೃದಯಾಘಾತ: ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ – ಆರ್.ಅಶೋಕ ಕಿಡಿ

ಕೋವಿಡ್ ಲಸಿಕೆ ಬಿಜೆಪಿ ಲಸಿಕೆ ಅಲ್ಲ, ಇದು ಕೋಟ್ಯಂತರ ಭಾರತೀಯರನ್ನು ರಕ್ಷಿಸಿದ ಲಸಿಕೆ. ಆರ್.ಅಶೋಕ (R.AShoka)

[ccc_my_favorite_select_button post_id="110380"]
88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಕನ್ನಡ ಸಾಹಿತ್ಯ ಸಮ್ಮೇಳನ ಚರಿತ್ರೆ ಸೃಷ್ಟಿಸಲಿದೆ: ಸಚಿವ ಜಮೀರ್ ಅಹ್ಮದ್ ಖಾನ್

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೊಣೆಗಾರಿಕೆ ನಮಗೆ ದೊರೆತಿರುವುದು ಅದೃಷ್ಟ: ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದರು.

[ccc_my_favorite_select_button post_id="110377"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!