ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸುಸಜ್ಜಿತ 100 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಗೆ ಪರಿಕರಗಳು ಇಂದು ಆಗಮಿಸಿದ್ದು, ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪೂಜೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕ ವೆಂಕಟರಮಣಯ್ಯ, ಕೋವಿಡ್-19 ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸೋಂಕಿಗೆ ಒಳಗಾಗುವ ಸೋಂಕಿತರಿಗೆ ತುರ್ತು ಚಿಕಿತ್ಸಾ ಸೌಲಭ್ಯವನ್ನು ಒದಗಿಸುವ ಸಲುವಾಗಿ ವಿಶ್ವ ಸಂಸ್ಥೆಯಿಂದ ದೇಶಾದ್ಯಂತ ಮೇಕ್ ಶಿಫ್ಟ್(Make Shift) ಆಸ್ಪತ್ರೆಗಳನ್ನು ತೆರೆಯಲಾಗುತ್ತಿದ್ದು, ಕರ್ನಾಟಕ ರಾಜ್ಯಕ್ಕೆ ಅನುಮೋದನೆಯಾಗಿರುವ 20, 50, 100 ಹಾಸಿಗೆಗಳ ಮೂರು ಆಸ್ಪತ್ರೆಗಳ ಪೈಕಿ ತಾಲ್ಲೂಕಿನಲ್ಲಿ ನಿರ್ಮಾಣವಾಗುತ್ತಿರುವ100 ಬೆಡ್‌ಗಳ ಮೇಕ್ ಶಿಫ್ಟ್(Make Shift) ಆಸ್ಪತ್ರೆ ಒಂದಾಗಿರುವುದು ಹೆಮ್ಮೆಯ ವಿಷಯವಾಗಿದೆ.
ಜಿಲ್ಲೆಯ ಇತರ ತಾಲೂಕುಗಳಲ್ಲಿ ಮೆಡಿಕಲ್ ಕಾಲೇಜುಗಳಿದ್ದು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಲ್ಲದ ಕಾರಣ ಚಿಕಿತ್ಸೆಗೆ ತೊಂದರೆಯಾಗಿತ್ತು, ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದ ಪರಿಣಾಮ ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪಕ್ಕದಲ್ಲಿ 100 ಆಕ್ಸಿಜನೇಟೆಡ್ ಬೆಡ್‌ಗಳ ಮೇಕ್ ಶಿಫ್ಟ್(Make Shift) ಆಸ್ಪತ್ರೆ ನಿರ್ಮಾಣವಾಗುತ್ತಿದೆ.
ಈ ಆಸ್ಪತ್ರೆ 25 ವೆಂಟಿಲೇಟರ್ ಬೆಡ್, 25 ಐಸಿಯು ಬೆಡ್ ಒಳಗೊಂಡಿರುವುದರಿಂದ ಕೋವಿಡ್-19 ಮೂರನೇ ಅಲೆಗೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದರು.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಬೆಸ್ಕಾಂ ಎಇಇ ರೋಹಿತ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….