ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ ಮತ್ತು ವಿಜಯಪುರ ಪಟ್ಟಣಗಳ ವ್ಯಾಪ್ತಿಯಲ್ಲಿರುವ ಬೀದಿಬದಿ ವ್ಯಾಪಾರಸ್ಥರಿಗೆ ಪ್ರಧಾನಮಂತ್ರಿ ಆತ್ಮ ನಿರ್ಭರ್ ನಿಧಿ ಕಿರುಸಾಲ ಯೋಜನೆಯಡಿ ಎರಡನೇ ಬಾರಿ ಸಾಲ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನಮಂತ್ರಿ ಆತ್ಮ ನಿರ್ಭರ್ ನಿಧಿ ಕಿರುಸಾಲ ಯೋಜನೆಯಡಿ ಈಗಾಗಲೇ ಬ್ಯಾಂಕುಗಳಿಂದ ರೂ. 10,000/- ಸಾಲ ಪಡೆದು, ಪೂರ್ಣ ಪ್ರಮಾಣದಲ್ಲಿ ಸಾಲವನ್ನು ಮರುಪಾವತಿ ಮಾಡಿದ ಬೀದಿ ವ್ಯಾಪಾರಿಗಳಿಗೆ ಎರಡನೇ ಬಾರಿಗೆ ರೂ. 20,000/- ಸಾಲ ನೀಡಲಾಗುವುದು.
ಅರ್ಜಿದಾರರು ಸಾಲ ಮರುಪಾವತಿ ಮಾಡಿರುವ ಬಗ್ಗೆ ಬ್ಯಾಂಕಿನಿಂದ ಪ್ರಮಾಣ ಪತ್ರ ಪಡೆದು, ಅರ್ಜಿಯೊಂದಿಗೆ ಸಲ್ಲಿಸಬೇಕು. ಎರಡನೇ ಬಾರಿಗೆ ಸಾಲ ಪಡೆಯಲು ಜಾಲತಾಣದ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಪಟ್ಟಣದ ನಗರಸಭೆ/ಪುರಸಭೆಗಳಲ್ಲಿ ಡೇ-ನಲ್ಮ್ ಶಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..