ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್‍ಗಳ ವಿತರಣೆ

ದೊಡ್ಡಬಳ್ಳಾಪುರ: ಆಧುನಿಕ ಜಗತ್ತಿನಲ್ಲಿ ಶಿಕ್ಷಣ ಪಡೆಯಲು ಹಿಂದೆಂದಿಗಿಂತಲೂ ಹೆಚ್ಚಿನ ಅನುಕೂಲಗಳಿದ್ದು, ಡಿಜಿಟಲ್ ತಂತ್ರಜ್ಞಾನ, ಅಂತರ್ಜಾಲದ ಮೂಲಕ ಹೆಚ್ಚಿನ ವಿಷಯಗಳನ್ನು ಅರಿಯಬಹುದಾಗಿದೆ. ಕೋವಿಡ್ ಸಂದರ್ಭದಲ್ಲಿ ಆನ್‍ಲೈನ್ ಮೊದಲಾದ  ತಂತ್ರಜ್ಞಾನವನ್ನು ವಿದ್ಯಾರ್ಥಿಗಳು ಸಯಪಯೋಗಪಡಿಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕಿದೆ ಎಂದು ಜಿಲ್ಲಾಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಮಾರ್ಟ್ ಕರ್ನಾಟಕ ಯೋಜನೆಯಡಿ ಪ್ರಥಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಟ್ಯಾಬ್‍ಗಳ ವಿತರಣೆ ಹಾಗೂ ಕಾಲೇಜಿನಲ್ಲಿ ಸ್ಮಾರ್ಟ್‌ ತರಗತಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ನಾವು ವ್ಯಾಸಂಗ ಮಾಡುತ್ತಿದ್ದಾಗ ಐಎಎಸ್, ಕೆಎಎಸ್ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯ ಮಾಹಿತಿ ಹಾಗೂ ಪುಸ್ತಕಗಳ ಕೊರತೆ ಹೆಚ್ಚಾಗಿತ್ತು. ಆದರೆ ಈಗ ಬೆರಳ ತುದಿಯಲ್ಲಿ ಎಲ್ಲಾ ಲಭ್ಯವಿದ್ದು, ಕಲಿಕೆ ಸುಲಭವಾಗುತ್ತಿದೆ. ಕೋವಿಡ್‍ನ ಕಾರಣದಿಂದ ಆನ್‍ಲೈನ್ ಶಿಕ್ಷಣ ಅನಿವಾರ್ಯವಾಗಿದ್ದು, ಸರ್ಕಾರ ನೀಡಿರುವ ಟ್ಯಾಬ್‍ಗಳಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಆದರೆ ಹೆಚ್ಚಿನ ಮೊಬೈಲ್ ಅಥವಾ ಟ್ಯಾಬ್ ಬಳಕೆ ಕಣ್ಣಿನ ದೋಷಗಳಿಗೆ ಕಾರಣವಾಗಿದ್ದು, ವಿದ್ಯಾರ್ಥಿಗಳು ಅವಶ್ಯವಿದ್ದಷ್ಟು ಬಳಸಬೇಕಿದೆ ಎಂದು ಕಿವಿಮಾತು ಹೇಳಿದರು.

ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ತಾಲೂಕಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹ ಮೂಲ ಸೌಕರ್ಯಗಳು ಹೆಚ್ಚಾಗಿವೆ.

ಸರ್ಕಾರ ನೀಡಿರುವ ಟ್ಯಾಬ್‍ಗಳನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ಈ ಯೋಜನೆಯಿಂದ ಹಲವಾರು ವಿದ್ಯಾರ್ಥಿಗಳಿಗೆ ಉಪಯೋಗವಾಗಲಿದೆ ಎಂದ ಅವರು, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿಗೆ ತೋಟಗಾರಿಕೆ ಇಲಾಖೆಯ ಆವರಣದಲ್ಲಿ ಸ್ಥಳ ಮಂಜೂರು ಮಾಡಲು ಜಿಲ್ಲಾಧಿಕಾರಿಗಳು ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

ಕಾಲೇಜಿನ ವಿದ್ಯಾರ್ಥಿಗಳಾದ ಅನನ್ಯ, ತರುಣ್ ಮಾತನಾಡಿ, ಟ್ಯಾಬ್ ವಿತರಣೆಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದ್ದು, ಶಿಕ್ಷಣಕ್ಕೆ ನೆರವಾಗುವ ಈ ಯೋಜನೆ ನೀಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಪವಿಭಾಗಾಕಾರಿ ಅರುಳ್ ಕುಮಾರ್,ತಹಶೀಲ್ದಾರ್ ಟಿ.ಎಸ್.ಶಿವರಾಜ್, ನಗರಸಭೆ ಪೌರಾಯುಕ್ತ ರಮೇಶ್.ಎಸ್.ಸುಣಗಾರ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!