ಮುಂದಿನ ಸಿ.ಎಂ ಸಿದ್ದರಾಮಯ್ಯ ಎಂದು ಘೋಷಿಸಲಿ: ಎಚ್.ಡಿ.ರೇವಣ್ಣ ಸವಾಲು

ಹಾಸನ: ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಿಸಿ, ಕಾಂಗ್ರೆಸ್ ಪಕ್ಷವನ್ನು ಬಲಿಷ್ಠಗೊಳಿಸಿ’ ಎಂದು ಶಾಸಕ ಎಚ್.ಡಿ.ರೇವಣ್ಣ ಅವರು ಕಾಂಗ್ರೆಸ್ ಹೈಕಮಾಂಡ್ಗೆ ಸವಾಲು ಹಾಕಿದರು.

‘ರಾಜಕಾರಣವೇ ಬೇರೆ, ನನ್ನ ಮತ್ತು ಸಿದ್ದರಾಮಯ್ಯ ನಡುವಿನ ವಿಶ್ವಾಸವೇ ಬೇರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಅವರೇ ಹೇಳುವಂತೆ ಜೆಡಿಎಸ್ ಸಿದ್ದರಾಮಯ್ಯ ಅವರನ್ನು ಸರಿಯಾಗಿ ನಡೆಸಿಕೊಳ್ಳಲಿಲ್ಲ. ಈಗ ಅವರು ಕಾಂಗ್ರೆಸ್ನಲ್ಲಿಯೇ ಇದ್ದಾರೆ. ಮುಂದಿನ ಮುಖ್ಯಮಂತ್ರಿ ಎಂದು ಘೋಷಿಸಲಿ’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಿದ್ದರಾಮಯ್ಯ ಸಹಕಾರ ಇಲ್ಲದಿದ್ದರೆ ಧ್ರುವನಾರಾಯಣ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ. ಮೊದಲು ಅವರು ಸಿದ್ದರಾಮಯ್ಯ ಪರವಾಗಿದ್ದಾರೋ ಅಥವಾ ಯಾರ ಪರ ಇದ್ದಾರೆ ಎಂಬುದನ್ನು ತಿಳಿಸಬೇಕು. ಬಿಜೆಪಿ ಸರ್ಕಾರವನ್ನು ಕಿತ್ತು ಹಾಕಬೇಕೆಂಬ ಕಾರಣಕ್ಕೆ ‘ಕಾಂಗ್ರೆಸ್ ಉಳಿದಿರೋದೆ ಸಿದ್ದರಾಮಯ್ಯ ಅವರಿಂದ’ಎಂದು ಹೇಳಿದ್ದೇನೆ ಹೊರತು ಕಾಂಗ್ರೆಸ್ ಪಕ್ಷದಲ್ಲಿ ಬಿರುಕು ಮೂಡಿಸುವ ಉದ್ದೇಶದಿಂದ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದರು.

ತೈಲ ದರ ಏರಿಕೆ ಖಂಡಿಸಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು. ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಸಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು. ಈ ವೇಳೆ ಕೋವಿಡ್ ನಿಯಮ ಪಾಲನೆ ಮಾಡಿ ಪರಸ್ಪರ ಅಂತರ ಕಾಯ್ದುಕೊಳ್ಳಲಾಗುವುದು. ರಾಜ್ಯದಲ್ಲಿ ಹಲವು ಕಡೆ ಲೀಟರ್ ಪೆಟ್ರೋಲ್ ದರ ₹ 100 ಗಡಿ ದಾಟಿದೆ. ಡೀಸೆಲ್ ದರವೂ ಏರಿಕೆಯಾಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಲೀಟರ್ಗೆ ₹ 26 ರೂ. ಸೆಸ್ ವಿಧಿಸಿದರೂ ಹೇಳಿಕೊಳ್ಳುವಂತಹ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಕೋವಿಡ್ನಿಂದ ಜನ ಸಾಯುತ್ತಿರುವ ಸಂದರ್ಭದಲ್ಲಿ ಮೊದಲು ಜನ ಪ್ರಾಣ ಉಳಿಸುವುದು ಮುಖ್ಯವಾಗಿತ್ತು. ಹಾಗಾಗಿ ಇಷ್ಟು ದಿನ ಸುಮ್ಮನಿರಬೇಕಾಯಿತು. ನಿತ್ಯ 6 ರಿಂದ 8 ಮಂದಿ ಮೃತಪಡುತ್ತಿದ್ದಾರೆ. ಕೋವಿಡ್ ಚಿಕಿತ್ಸೆಗೆ ಖರ್ಚು ಮಾಡಿದ ಶೇಕಡಾ 50 ರಷ್ಟು ಹಣವನ್ನು ಸರ್ಕಾರ ಭರಿಸಬೇಕು.  ಹಾಸನ ಹಾಲು ಒಕ್ಕೂಟ ಹಾಗೂ ಜಿಲ್ಲಾ ಸಕಾರ ಕೇಂದ್ರ ಬ್ಯಾಂಕ್ ವತಿಯಿಂದಲೂ ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದರು.

ಡಯಾಲಿಸಿಸ್ ನಿರ್ವಹಣೆ ಗುತ್ತಿಗೆಯನ್ನು ಖಾಸಗಿ ಕಂಪನಿಗೆ ನೀಡಿರುವುದರಿಂದ ಬಡವರ ರಕ್ತ ಹೀರುತ್ತಿದ್ದಾರೆ. ಡಯಾಲಿಸಿಸ್ ಮಾಡಿಸಲು ಬೇಕಾದ ಅಗತ್ಯ ಔಷಧಗಳನ್ನು ರೋಗಿಗಳೇ ತರಬೇಕಿದೆ. ಕೂಡಲೇ ಜಿಲ್ಲಾಡಳಿತ ಔಷಧ ಪೂರೈಸಲು ಕ್ರಮ ಕೈಗೊಳ್ಳಬೇಕು. ಗುತ್ತಿಗೆ ರದ್ದು ಮಾಡಬೇಕು ಎಂದು ಒತ್ತಾಯಿಸಿದರು.

ಸಂಕಷ್ಟದಲ್ಲಿರುವ ಅಸಂಘಟಿತ ವಲಯಗಳ ಕಾರ್ಮಿಕರ ನೆರವಿಗೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಆರ್ಥಿಕ ಪ್ಯಾಕೇಜ್ ತಲುಪಿಲ್ಲ. ಅಸಂಘಟಿತ ಕಾರ್ಮಿಕರಿಗೆ ದೃಢೀಕರಣ ಪತ್ರಗಳನ್ನು ಶೀಘ್ರವೇ ನೀಡಿ ಎಲ್ಲರಿಗೂ ಪರಿಹಾರ ಹಣ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದೇನೆ ಹೊರತು ಯಾವುದೇ ಕಡತ ಸಹಿ ಮಾಡಿಸಿಕೊಳ್ಳಲು ಅಲ್ಲ. ಒಂದು ವೇಳೆ ವೈಯಕ್ತಿಕ ಅಥವಾ ರಾಜಕೀಯ ಕಾರಣಕ್ಕೆ ಸಿ.ಎಂ ಭೇಟಿ ಮಾಡಿರುವುದನ್ನು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತನಾಗುವೆ ಎಂದು ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿಗೆ ರೇವಣ್ಣ ಸವಾಲು ಹಾಕಿದರು.

ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ ನೀಡಿದ ವೇಳೆ, ನನೆಗುದಿಗೆ ಬಿದ್ದಿರುವ ಯೋಜನೆಗಳ ಬಗ್ಗೆ ಅವರ ಗಮನಕ್ಕೆ ತಂದು, ಮನವಿ ಪತ್ರ ಅರ್ಪಿಸಿದ್ದೇನೆ. ಹಾಸನ ವಿಮಾನ ನಿಲ್ದಾಣ ಗುತ್ತಿಗೆಯನ್ನು ಇಂತವರಿಗೆ ಕೊಡಿ ಎಂದು ಹೇಳಿಲ್ಲ. ನಮ್ಮ ಬಳಿ ಯಾರೂ ಗುತ್ತಿಗೆದಾರರು ಇಲ್ಲ ಎಂದರು. (ಸಂಗ್ರಹ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜ್ಯ ಸರ್ಕಾರವನ್ನು ಕಡೆಗಣಿಸಿ ಸಿಗಂದೂರು ಸೇತುವೆ ಉದ್ಘಾಟನೆ.!?: ಪ್ರಧಾನಿಗೆ ಸಿಎಂ ಪತ್ರ

ರಾಜಕೀಯ ಕೆಸರೆರಚಾಟ, ಎಡಬಿಡದೆ ಸುರಿಯುತ್ತಿದ್ದ ಮಳೆಯ ನಡುವೆಯೂ ಸೋಮವಾರ ಮಧ್ಯಾಹ್ನ ಸಾಗರ ತಾಲೂಕಿನ ಸಿಗಂದೂರು ನೂತನ ತೂಗು ಸೇತುವೆಯನ್ನು (SigandooruBridge)

[ccc_my_favorite_select_button post_id="111123"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!