ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ಸುಸಜ್ಜಿತ ಮೇಕ್ ಶಿಫ್ಟ್ ಆಸ್ಪತ್ರೆಯ ಕಾಮಗಾರಿಗೆ ನೆರವಾಗಲು ದೊಡ್ಡಬಳ್ಳಾಪುರ ಕೈಗಾರಿಕೆಗಳ ಸಂಘದ ವತಿಯಿಂದ ಕೈಗಾರಿಕೆಗಳ ಸಿ.ಎಸ್.ಆರ್ ಅನುದಾನದಡಿ ರೂ 8 ಲಕ್ಷ, ಮುಸಾಷಿ ಆಟೋ ಪಾರ್ಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಅನುದಾನದಡಿ ರೂ.3 ಲಕ್ಷ ಹಾಗೂ ಸಿಗ್ನೋಡ್ ಇಂಡಿಯಾ ಲಿಮಿಟೆಡ್ ನ ಸಿ.ಎಸ್.ಆರ್ ಅನುದಾನದಡಿ ರೂ. 3 ಲಕ್ಷಗಳ ಚೆಕ್ ಗಳನ್ನು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಹಸ್ತಾಂತರಿಸಲಾಯಿತು.
ಈ ವೇಳೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನರೇಂದ್ರ ಬಾಬು, ದೊಡ್ಡಬಳ್ಳಾಪುರ ಕೈಗಾರಿಕಾ ಸಂಘದ ಅಧ್ಯಕ್ಷರಾದ ಟಿ.ಎಸ್.ಗುಲ್ಹಾಟಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಂಜನೇಯಲು, ಖಜಾಂಚಿ ಶ್ರೀನಿವಾಸ ಶೆಟ್ಟಿ, ಇಂಡೋಮಿಮ್ ಕಂಪನಿ ಪ್ಲಾಂಟ್ ಮ್ಯಾನೇಜರ್ ಹಿಲ್ಸನ್, ಸಿಗ್ನೋಟ್ ಕಂಪನಿಯ ಹರೀಶ್ ಹಾಗೂ ಮುಸಾಶಿ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..