ಬೆಂ.ಗ್ರಾ.ಜಿಲ್ಲೆ: ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಗೊಂದಲವನ್ನು ಬಗೆಹರಿಸಿರುವ ಪ್ರಧಾನಿ ನರೇಂದ್ರ ಮೋದಿ ಜೂ 21ರಿಂದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಕೇವಲ ಘೋಷಣೆ ಮಾತ್ರ ಸೀಮಿತವಾಗಿದ್ದು, ಲಸಿಕೆ ದೊರಕದೆ ಸಾರ್ವಜನಿಕರು ಪರದಾಡುವಂತಾಗಿದೆ.
ಜೂ.7ರಂದು ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಸಕ್ತ ಶತಮಾನದ ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಲಸಿಕೀಕರಣವೇ ಮಹಾಮದ್ದು, ದೇಶಾದ್ಯಂತ ಶೇ. 100ರಷ್ಟು ಲಸಿಕೆ ಪೂರೈಕೆಗೆ ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದು ಭರವಸೆ ನೀಡಿದ್ದರು.
ಕೇಂದ್ರ ಸರ್ಕಾರ ಲಸಿಕಾ ಕಂಪನಿಗಳಿಂದ ಲಸಿಕೆ ಖರೀದಿಸಿ ಎಲ್ಲಾ ರಾಜ್ಯಗಳಿಗೂ ಹಂಚಲಿದೆ. ಜೊತೆಗೆ, ಜೂ 21ರಿಂದ ಲಸಿಕೆ ನೀಡುವ ನಿಟ್ಟಿನಲ್ಲಿ ಶೀಘ್ರವೇ ಪ್ರತ್ಯೇಕ ಮಾರ್ಗಸೂಚಿ ಹೊರಬೀಳಲಿದೆ. ದೇಶಾದ್ಯಂತ ಉಚಿತ ಲಸಿಕೆ ನೀಡಲಾಗುವುದು ಎಂದಿದ್ದರು.
ಅದರಂತೆ ಜೂ.21ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲಸಿಕೆ ಅಭಿಯಾನ ನಂತರ, ಹಳೇ ಸ್ಥಿತಿಗೆ ಮರಳಿದ್ದು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಅಭಾವ ಎದುರಾಗಿದೆ.
ಆದ್ಯತಾ ಗುಂಪುಗಳಿಗೆ ಮಾತ್ರ ಲಸಿಕೆ: ಪ್ರಧಾನಿ ಮೋದಿ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಯುವ ಸಮುದಾಯ ಲಸಿಕೆಗಾಗಿ ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದು, ಅಲ್ಲಿನ ಸಿಬ್ಬಂದಿಗಳು ದೃಢೀಕರಣ ಪತ್ರ ತಂದರೆ ಮಾತ್ರ ಲಸಿಕೆ ಎಂಬ ಹೇಳಿಕೆಯಿಂದ ಆಕ್ರೋಶಕ್ಕೆ ಒಳಾಗುತ್ತಿದ್ದಾರೆ. ಪ್ರಧಾನಿ ಮೋದಿ ಘೋಷಿಸಿದರು ಲಸಿಕೆ ನೀಡುತ್ತಿಲ್ಲವೆಂದು ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸುತ್ತಿದ್ದಾರೆ.
ಶೇ.25ಕ್ಕು ಹೆಚ್ಚು 18ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಜಿಲ್ಲಾ ಆರೋಗ್ಯ ಇಲಾಖೆಯ ಮಾಹಿತಿ ಅನ್ವಯ ಪ್ರಸ್ತುತ ಶೇ.25ಕ್ಕು ಹೆಚ್ಚು ಮಂದಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. ಆದರೆ ಇವರೆಲ್ಲರೂ ಆದ್ಯತಾ ಗುಂಪಿಗೆ ಸೇರಿದವರು ಬಿಟ್ಟರೆ ಸಾಮಾನ್ಯರಿಗೆ ಲಸಿಕೆ ದೊರೆತಿಲ್ಲ.
ಲಸಿಕೆ ವಿತರಣೆ ಶೀಘ್ರ: ಸರ್ಕಾರ ನೀಡುವ ನೀಡುವ ಲಸಿಕೆಯನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ಪೋರ್ಟಲ್ ಅನ್ವಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸಾಧ್ಯವಾಗದ ಕಾರಣ ಆದ್ಯತಾ ಗುಂಪಿನವರು ದೃಢೀಕರಣ ಪತ್ರ ತಂದರೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಲಸಿಕೆ ಕೊರತೆ ಉಂಟಾಗಿತ್ತು, ಇಂದು 14 ಸಾವಿರ ಲಸಿಕೆ ಬಂದಿದ್ದು, ಆರೋಗ್ಯ ಕೇಂದ್ರಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಹರಿತಲೇಖನಿಗೆ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..