ಕರೊನಾ ಮೂರನೇ ‌ಅಲೆ‌ ಎದುರಿಸಲು‌ ಮಕ್ಕಳಲ್ಲಿ ಪೌಷ್ಟಿಕಾಂಶ ಅಗತ್ಯ: ಡಾ.ಪರಮೇಶ್ವರ

ದೊಡ್ಡಬಳ್ಳಾಪುರ: ಕರೊನಾ ಮೂರನೇ ಅಲೆಯನ್ನು ‌ಎದುರಿಸಲು ಮಕ್ಕಳು ಅಪೌಷ್ಟಿಕತೆಯಿಂದ ದೂರ ಉಳಿಯುವುದು ಅತ್ಯವಶ್ಯಕವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ ತಿಳಿಸಿದರು.

ನಗರದ ತಾಲೂಕು ವೈದ್ಯಾಧಿಕಾರಿ ಕಛೇರಿಯಲ್ಲಿ ಆವರಣದಲ್ಲಿ ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಕ್ಕಳಿಗಾಗಿ ನೀಡಲಾದ ಔಷಧ, ಸಿರಫ್ ಗಳನ್ನು ಸ್ವೀಕರಿಸಿ ಅವರು ಮಾತನಾಡಿದರು.

ಕೋವಿಡ್ 19 ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರಲಿದೆ ಎಂದು ತಜ್ಞರು ಸಲಹೆ ನೀಡುತ್ತಿದ್ದು, ಅದನ್ನು ಎದುರಿಸಲು ತಾಲೂಕಿನ ಮಕ್ಕಳಿಗೆ ಉಪಯುಕ್ತವಾದ ಔಷಧಿ ಮತ್ತು ಪೌಷ್ಟಿಕಾಂಶದ ಸಿರಫ್ ಗಳನ್ನು ಟ್ರಸ್ಟ್ ನವರು ಹೆಚ್ಚಿನ ಪ್ರಮಾಣದಲ್ಲಿ  ನೀಡಿರುವುದು ಪ್ರಶಂಸನೀಯ ವಿಷಯವಾಗಿದೆ. ಈ ಔಷಧಗಳನ್ನು ಸರಕಾರ ಜಾರಿಗೊಳಿಸಿರುವ ಮಕ್ಕಳ ವೈದ್ಯರ ನಡಿಗೆ ಹಳ್ಳಿ ಮಕ್ಕಳ ಕಡೆಗೆ ಕಾರ್ಯಕ್ರಮದಲ್ಲಿ ಅವಶ್ಯಕವಿರುವ ಮಕ್ಕಳಿಗೆ ವಿತರಿಸಲಾಗುವುದು ಎಂದರು.

ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ನ  ಅಧ್ಯಕ್ಷ ಅರ್ಜುನ್ ವೈ.ಎನ್ ಮಾತನಾಡಿ, ಕರೊನಾದ ಮೂರನೇ ಅಲೆಯ ಸಂಧರ್ಭದಲ್ಲಿ ಮಕ್ಕಳ ಅಪೌಷ್ಟಿಕತೆಯಿಂದ ಬಳಲುವುದನ್ನು ತಪ್ಪಿಸಲು ಸಾರ್ವಜನಿಕರಿಗೆ ಸಹಕಾರದೊಂದಿಗೆ ಔಷಧಿಗಳನ್ನು  ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಔಷಧಿಗಳನ್ನು ತಲುಪಿಸಲು ಪ್ರಯತ್ನಿಸಲಾಗುವುದು ಎಂದರು.

ಈ ವೇಳೆ ಡಾ.ಚಿದಾನಂದ, ಡಾ.ಪಾಟೀಲ್, ಡಾ.ರುದ್ರೇಶ್, ಡಾ.ಗಂಗಾ, ಡಾ.ಸಿಮ್ರಾನ್, ವಾತ್ಸಲ್ಯ ಧಾಮ ಚಾರಿಟಬಲ್ ಟ್ರಸ್ಟ್ ನ ಗೌರವ ಅಧ್ಯಕ್ಷರು ಲೀಲಾವತಿ.ಟಿ.ಈ, ಖಜಾಂಚಿ ಪವನ್ ಕುಮಾರ್.ಕೆ, ನಿರ್ದೇಶಕಿ ಹರ್ಷಿತಾ, ನಿರ್ದೇಶಕ ದಿವಾಕರ್, ಸದಸ್ಯರಾದ ಪ್ರವೀಣ್, ಪ್ರಿಯಾಂಕ ಹೋಟೆಲ್ ಬಾಲು, ಉಲ್ಲಾಸ್, ನಮೋದಯ ಚೇತನ್ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!