ಪ್ರಧಾನಿ ಮೋದಿ ಘೋಷಣೆ ನಂಬಿ ಲಸಿಕೆಗಾಗಿ ಸಾರ್ವಜನಿಕರ ಪರದಾಟ / ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗಿಲ್ಲ ಕೋವಿಡ್ ಲಸಿಕೆ / ದೃಢೀಕರಣ ಪತ್ರ ತಂದವರಿಗಷ್ಟೆ ಆದ್ಯತೆ

ಬೆಂ.ಗ್ರಾ.ಜಿಲ್ಲೆ: ದೇಶದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಗೊಂದಲವನ್ನು ಬಗೆಹರಿಸಿರುವ ಪ್ರಧಾನಿ ನರೇಂದ್ರ ಮೋದಿ ಜೂ 21ರಿಂದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ ನೀಡುವುದಾಗಿ ಘೋಷಣೆ ಕೇವಲ ಘೋಷಣೆ ಮಾತ್ರ ಸೀಮಿತವಾಗಿದ್ದು, ಲಸಿಕೆ ದೊರಕದೆ ಸಾರ್ವಜನಿಕರು ಪರದಾಡುವಂತಾಗಿದೆ.

ಜೂ.7ರಂದು ದೇಶದ ಜನರನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಸಕ್ತ ಶತಮಾನದ ಮಹಾಮಾರಿ ಕೋವಿಡ್-19 ವಿರುದ್ಧ ಹೋರಾಟಕ್ಕೆ ಲಸಿಕೀಕರಣವೇ ಮಹಾಮದ್ದು, ದೇಶಾದ್ಯಂತ ಶೇ. 100ರಷ್ಟು ಲಸಿಕೆ ಪೂರೈಕೆಗೆ ತ್ವರಿತಗತಿಯಲ್ಲಿ ಕೆಲಸ ನಿರ್ವಹಿಸಲಾಗುತ್ತಿದೆ ಎಂದು ಭರವಸೆ ನೀಡಿದ್ದರು.

ಕೇಂದ್ರ ಸರ್ಕಾರ ಲಸಿಕಾ ಕಂಪನಿಗಳಿಂದ ಲಸಿಕೆ ಖರೀದಿಸಿ ಎಲ್ಲಾ ರಾಜ್ಯಗಳಿಗೂ ಹಂಚಲಿದೆ. ಜೊತೆಗೆ, ಜೂ 21ರಿಂದ ಲಸಿಕೆ ನೀಡುವ ನಿಟ್ಟಿನಲ್ಲಿ ಶೀಘ್ರವೇ ಪ್ರತ್ಯೇಕ ಮಾರ್ಗಸೂಚಿ ಹೊರಬೀಳಲಿದೆ. ದೇಶಾದ್ಯಂತ ಉಚಿತ ಲಸಿಕೆ ನೀಡಲಾಗುವುದು ಎಂದಿದ್ದರು.

ಅದರಂತೆ ಜೂ.21ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯಶಸ್ಸು ಕಂಡ ಲಸಿಕೆ ಅಭಿಯಾನ ನಂತರ, ಹಳೇ ಸ್ಥಿತಿಗೆ ಮರಳಿದ್ದು, ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಅಭಾವ ಎದುರಾಗಿದೆ.

ಆದ್ಯತಾ ಗುಂಪುಗಳಿಗೆ ಮಾತ್ರ ಲಸಿಕೆ: ಪ್ರಧಾನಿ ಮೋದಿ ಘೋಷಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಯುವ ಸಮುದಾಯ ಲಸಿಕೆಗಾಗಿ ಆಸ್ಪತ್ರೆಗಳಿಗೆ ದೌಡಾಯಿಸುತ್ತಿದ್ದು, ಅಲ್ಲಿನ ಸಿಬ್ಬಂದಿಗಳು ದೃಢೀಕರಣ ಪತ್ರ ತಂದರೆ ಮಾತ್ರ ಲಸಿಕೆ ಎಂಬ ಹೇಳಿಕೆಯಿಂದ ಆಕ್ರೋಶಕ್ಕೆ ಒಳಾಗುತ್ತಿದ್ದಾರೆ. ಪ್ರಧಾನಿ ಮೋದಿ ಘೋಷಿಸಿದರು ಲಸಿಕೆ ನೀಡುತ್ತಿಲ್ಲವೆಂದು ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸುತ್ತಿದ್ದಾರೆ.

ಶೇ.25ಕ್ಕು ಹೆಚ್ಚು 18ವರ್ಷ ಮೇಲ್ಪಟ್ಟವರಿಗೆ ಲಸಿಕೆ: ಜಿಲ್ಲಾ ಆರೋಗ್ಯ ಇಲಾಖೆಯ ಮಾಹಿತಿ ಅನ್ವಯ ಪ್ರಸ್ತುತ ಶೇ.25ಕ್ಕು ಹೆಚ್ಚು ಮಂದಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. ಆದರೆ ಇವರೆಲ್ಲರೂ ಆದ್ಯತಾ ಗುಂಪಿಗೆ ಸೇರಿದವರು ಬಿಟ್ಟರೆ ಸಾಮಾನ್ಯರಿಗೆ ಲಸಿಕೆ ದೊರೆತಿಲ್ಲ.

ಲಸಿಕೆ ವಿತರಣೆ ಶೀಘ್ರ: ಸರ್ಕಾರ ನೀಡುವ ನೀಡುವ ಲಸಿಕೆಯನ್ನು ಜಿಲ್ಲೆಯ ಆಸ್ಪತ್ರೆಗಳಿಗೆ ಪೂರೈಸಲಾಗುತ್ತಿದೆ. ಪೋರ್ಟಲ್ ಅನ್ವಯ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಸಾಧ್ಯವಾಗದ ಕಾರಣ ಆದ್ಯತಾ ಗುಂಪಿನವರು ದೃಢೀಕರಣ ಪತ್ರ ತಂದರೆ ಮಾತ್ರ ಲಸಿಕೆ ನೀಡಲಾಗುತ್ತಿದೆ. ಕಳೆದ ಎರಡು ದಿನಗಳಿಂದ ಲಸಿಕೆ ಕೊರತೆ ಉಂಟಾಗಿತ್ತು, ಇಂದು 14 ಸಾವಿರ ಲಸಿಕೆ ಬಂದಿದ್ದು, ಆರೋಗ್ಯ ಕೇಂದ್ರಗಳಿಗೆ ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಹರಿತಲೇಖನಿಗೆ ತಿಳಿಸಿದ್ದಾರೆ. ‌

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!