ಬೆಂ.ಗ್ರಾ.ಜಿಲ್ಲೆ: ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ.) ಅವರು ಜೂನ್ 25ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜೂನ್ 25ರಂದು ಬೆಳಿಗ್ಗೆ 10.30 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರೆಯಲಾಗಿರುವ ಬ್ಲ್ಯಾಕ್ ಫಂಗಸ್ ಆಪರೇಷನ್ ಥಿಯೇಟರ್ ಅನ್ನು ಉದ್ಘಾಟಿಸಲಿದ್ದಾರೆ. ನಂತರ ಬೆಳಿಗ್ಗೆ 10.45 ಗಂಟೆಗೆ ದೊಡ್ಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ, ಅನಂತರ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ನಿರ್ಮಾಣ ಹಂತದಲ್ಲಿರುವ ಮೇಕ್ ಶಿಫ್ಟ್ ಆಸ್ಪತ್ರೆಯ ಕಾಮಗಾರಿಯನ್ನು ಪರಿಶೀಲಿಸಲಿದ್ದಾರೆ.
ಬಳಿಕ ಬೆಳಿಗ್ಗೆ 11.00 ಗಂಟೆಗೆ ಸಚಿವರು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..