ದೊಡ್ಡಬಳ್ಳಾಪುರ: ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ ಅಳವಡಿಸಿರುವ ಬ್ಲ್ಯಾಕ್ ಫಂಗಸ್ ಆಪರೇಷನ್ ಥಿಯೇಟರ್ ಅನ್ನು ಪೌರಾಡಳಿತ ಇಲಾಖೆ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಎನ್.ನಾಗರಾಜು(ಎಂ.ಟಿ.ಬಿ.) ಇಂದು ಉದ್ಘಾಟಿಸಿದರು.
ಈ ವೇಳೆ ಶಾಸಕ ಟಿ.ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಕೋನಾ ವಂಶಿ ಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪ ವಿಭಾಗಾಧಿಕಾರಿ ಅರುಳ್‌ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್, ಆರೋಗ್ಯಾಧಿಕಾರಿ ಡಾ.ಪರಮೇಶ್ವರ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..