ಬೆಂ.ಗ್ರಾ.ಜಿಲ್ಲೆ: ಕೋವಿಡ್-19 ಪರಿಸ್ಥಿತಿ ಹತೋಟಿಗೆ ಬರುತ್ತಿರುವ ಹಿನ್ನೆಲೆ, ಸರ್ಕಾರದ ಆದೇಶದಂತೆ ಹೋಟೆಲ್‌ಗಳು, ರೆಸಾರ್ಟ್‌ಗಳು, ಫಂಕ್ಷನ್ ಹಾಲ್‌ಗಳು ಇತ್ಯಾದಿಗಳಲ್ಲಿ ವಿವಾಹ ಕಾರ್ಯಗಳನ್ನು ನಡೆಸಲು ಪಾಸ್ ಹೊಂದಿರುವ 40 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ರಾಜ್ಯ ಕಾರ್ಯಕಾರಿ ಸಮಿತಿಯ ಮಾರ್ಗಸೂಚಿ ಅನ್ವಯ ಜಿಲ್ಲೆಯಲ್ಲಿ ಜೂನ್ 28 ರಿಂದ ಮದುವೆಗಳನ್ನು ಆಯೋಜಿಸುವವರು ಸಂಬಂಧಪಟ್ಟ ತಾಲ್ಲೂಕುಗಳಲ್ಲಿ ತಹಶೀಲ್ದಾರ್ ಅವರಿಂದ ಕಡ್ಡಾಯವಾಗಿ ಅನುಮತಿ ಪಡೆಯುವುದು.
ಪ್ರತಿ ಮದುವೆ ಕಾರ್ಯಕ್ಕೆ 40 ಪಾಸ್‌ಗಳನ್ನು ಮಾತ್ರ ನೀಡಲು ಅವಕಾಶವಿದ್ದು, ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್‌ಗಳನ್ನು ವರ್ಗಾಯಿಸುವಂತಿಲ್ಲ ಹಾಗೂ ಮದುವೆ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್-19 ನ ಸೂಕ್ತ ನಡವಳಿಕೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು.
ಮದುವೆ ಕಾರ್ಯದ ಸಮಯದಲ್ಲಿ ಮೇಲೆ ತಿಳಿಸಿದ ನಿಯಮಗಳನ್ನು ಉಲ್ಲಂಘನೆ ಹಾಗೂ ಅನುಸರಣೆ ಮಾಡದಿದ್ದಲ್ಲಿ, ಮದುವೆ ಸಂಘಟಕ/ ಸೌಲಭ್ಯದ ಮಾಲೀಕರಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020, ವಿಪತ್ತು ನಿರ್ವಹಣಾ ಕಾಯ್ದೆ 2005ರ ಐಪಿಸಿಯ ಸಂಬಂಧಿತ ವಿಭಾಗದ ಅಡಿಯಲ್ಲಿ ಕಾನೂನು ಕ್ರಮಗಳ ಜೊತೆಗೆ ಅನ್ವಯವಾಗುವ ಇತರ ಕಾನೂನು ನಿಬಂಧನೆಗಳ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..