ನ್ಯೂಸ್ ಚಾನಲ್ ಗಳಿಗೆ ಪ್ರೊಫೆಷನಲ್ ಎಥಿಕ್ಸ್ ಇಲ್ವಾ….?: ಖಾಸಗಿ ಸುದ್ದಿ ವಾಹಿನಿ ವಿರುದ್ದ ಹರಿಹಾಯ್ದ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್

ಬೆಂಗಳೂರು: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ನ್ಯೂಜಿಲ್ಯಾಂಡ್ ವಿರುದ್ದ ಭಾರತ ಸೋಲನ್ನು ಅನುಭವಿಸಿ ಎರಡು ದಿನವಾದರೂ, ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಬಹಳಷ್ಟು ಸದ್ದು ಮಾಡುತ್ತಲೇ ಇದೆ.

ಸುಮಾರು ಎರಡು ವರ್ಷ ನಡೆದ ಡಬ್ಲ್ಯುಟಿಸಿಯ ಪಾಯಿಂಟ್ ಪಟ್ಟಿಯಲ್ಲಿ ಭಾರತ ಮೊದಲ ಮತ್ತು ನ್ಯೂಜಿಲೆಂಡ್ ಎರಡನೇ ಸ್ಥಾನ ಪಡೆದು ಪ್ರಶಸ್ತಿ ಸುತ್ತಿಗೆ ತಲುಪಿದ್ದವು.

ಫೈನಲ್ ಪಂದ್ಯದ ಮೊದಲ ಮತ್ತು ನಾಲ್ಕನೇ ದಿನದಾಟಗಳು ಮಳೆಗೆ ಆಹುತಿಯಾಗಿದ್ದವು. ಆದ್ದರಿಂದ ಪಂದ್ಯವನ್ನು ಮೀಸಲಾಗಿದ್ದ ಆರನೇ ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ತಂಡದ ಮೇಲಿನ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯ ಮತ್ತಿತರರ ಕಾರಣ ವಿಶ್ವ ಟೆಸ್ಟ್ ಕ್ರಿಕೆಟ್‌ ಚಾಂಪಿಯನ್‌ಷಿಪ್‌ನ ಕಿರೀಟ ಭಾರತದ ಕೈ ತಪ್ಪಿದೆ. ಆದರೆ ಈ ಸೋಲಿನ ಕುರಿತು ಖಾಸಗಿ ಸುದ್ದಿವಾಹಿಯೊಂದು ವಿಶೇಷ ವರದಿ ಮಾಡುವ ವೇಳೆ ನೀಡಿರುವ ಶೀರ್ಷಿಕೆ ಮಾಜಿ ಆಟಗಾರರು ಹಾಗೂ ಕ್ರಿಕೆಟ್ ಪ್ರೇಮಿಗಳ ಆಕ್ರೋಶಕ್ಕೆ ಒಳಗಾಗಿದೆ.

ರಾಜ್ಯದ ಪ್ರತಿಷ್ಟಿತ ಸುದ್ದಿವಾಹಿನಿ ದಿಗ್ವಿಜಯ ನ್ಯೂಸ್ ಭಾರತದ ಸೋಲಿನ ಕುರಿತು ವಿಶೇಷ ಕಾರ್ಯಕ್ರಮದ ವೇಳೆ ಕೀಳು ಮಟ್ಟದ ಶೀರ್ಷಿಕೆ ನೀಡಿದೆ ಎಂಬುದು ಆಕ್ರೋಶಕ್ಕೆ ಒಳಗಾಗಲು ಕಾರಣ.

ಈ ಕುರಿತು ಮಾಜಿ ಟೆಸ್ಟ್ ಕ್ರಿಕೆಟ್ ಆಟಗಾರ ದೊಡ್ಡಗಣೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ನಮ್ಮ ಈ ಕನ್ನಡ ನ್ಯೂಸ್ ಚ್ಯಾನಲ್ ಗಳಿಗೆ professional ethics ಅನ್ನೋದೇ ಇಲ್ವಾ ? ಒಂದು ಪಂದ್ಯ ಸೋತ ಮಾತ್ರಕ್ಕೆ ನಮ್ಮ ಆಟಗಾರರನ್ನು ಇಂತಹ ಕೀಳು ಮಟ್ಟದ ಶೀರ್ಷಿಕೆಯಿಂದ ಟೀಕೆ ಮಾಡೋದು ಎಷ್ಟರ ಮಟ್ಟಿಗೆ ಸರಿ ? ಎಂದು ಟ್ವಿಟ್ ಮೂಲಕ ಪ್ರಶ್ನಿಸಿದ್ದಾರೆ.

ದೊಡ್ಡ ಗಣೇಶ್ ಆಕ್ರೋಶಕ್ಕೆ ಅನೇಕರು ಬೆಂಬಲ ಸೂಚಿಸಿದ್ದು, ಟ್ರೋಲ್ ಪೇಜ್ಗಳು ಸುದ್ದಿ ವಾಹಿನಿ ವರದಿ ಶೀರ್ಷಿಕೆ ವಿರುದ್ದ ಸಮರವನ್ನೆ ಸಾರಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!