ದೊಡ್ಡಬಳ್ಳಾಪುರ: ರಾಷ್ಟ್ರಿಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ನಾಡಪ್ರಭು ಕೆಂಪೇಗೌಡರ 512ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ನಗರದ ತಾಲೂಕು ಕಚೇರಿಯಲ್ಲಿ ಕೊವಿಡ್-19 ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಉಪವಿಭಾಗಾಧಿಕಾರಿ ಅರುಳ್ ಕುಮಾರ್, ಜಗದ್ವಿಖ್ಯಾತ ಬೆಂಗಳೂರನ್ನು ನಿರ್ಮಿಸಿದ ನಾಡಪ್ರಭು ಕೆಂಪೇಗೌಡ ಅವರ ಆಡಳಿತ, ಸಾಧನೆ ಅನನ್ಯವಾಗಿದೆ. ಬೆಂಗಳೂರಿಗೆ ನೀರಿನ ಅಗತ್ಯ ಕಂಡು ನೂರಾರು ವರ್ಷಗಳ ಹಿಂದರೆಯೇ ಹಲವಾರು ಕೆರೆಗಳನ್ನು ಕಟ್ಟಿಸಿ, ಪರಿಸರ ಪ್ರೇಮವನ್ನು ಮೆರೆದಿದ್ದ ಕೆಂಪೇಗೌಡ ಅವರ ಬದುಕು ಆದರ್ಶವಾಗಬೇಕು ಎಂದರು.
ತಹಸೀಲ್ದಾರ್ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷ ಟಿ.ಎಸ್.ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ನರಸಿಂಹಯ್ಯ, ಗ್ರಾಮ ಲೆಕ್ಕಿಗ ರಾಜೇಂದ್ರ ಬಾಬು, ಮುಖಂಡರಾದ ವೆಂಕಟರಾಜು, ಬಂತಿ ವೆಂಕಟೇಶ್, ಜಯಕರ್ನಾಟಕ ಸಂಘಟನೆಯ ಮುನೇಗೌಡ ಮತ್ತಿತರರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..