ಬೆಂ.ಗ್ರಾ.ಜಿಲ್ಲೆ: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ, ನಾಡಪ್ರಭು ಕೆಂಪೇಗೌಡರ 512ನೇ ಜಯಂತಿ ಕಾರ್ಯಕ್ರಮಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ದೀಪವನ್ನು ಬೆಳಗಿಸಿ, ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ, ಆರ್.ಎಚ್.ಎಂ.ಗಂಗಾಧರಪ್ಪ ಸೇರಿದಂತೆ ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..