ದೊಡ್ಡಬಳ್ಳಾಪುರ: ರಾಜ್ಯ ಚುನಾವಣಾ ಆಯೋಗದ ಸೂಚನೆ ಹಿನ್ನೆಲೆ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆ-2021ರ ಕುರಿತಾದ ತಾಲೂಕಿನ 242 ಮತಗಟ್ಟೆಗಳ ಭಾವಚಿತ್ರವಿರುವ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಹಶೀಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ನೀಡಿರುವ ಅವರು, ಕರಡು ಮತದಾರರ ಪಟ್ಟಿಯನ್ನು ಏ.17 ರಂದು ಪ್ರಕಟಿಸಲಾಗಿದ್ದು, ಮತದಾರರ ಪಟ್ಟಿಗೆ ಸ್ವೀಕರಿಸಲಾದ ಹಕ್ಕು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಿ ಜೂ.28ರಂದು ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಗಳನ್ನು ಸಂಬಂಧಪಟ್ಟ ಮತಗಟ್ಟೆಗಳಲ್ಲಿ, ಎಲ್ಲಾ ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕು ಕಛೇರಿಯಲ್ಲಿ ಸಾರ್ವಜನಿಕವಾಗಿ ಪ್ರಕಟಿಸಲಾಗಿರುತ್ತದೆ ಎಂದವರು ತಿಳಿಸಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..