ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿನಿಧಿ ಯೋಜನೆ ಅಡಿ ವಿವಿಧ 48 ದತ್ತಿನಿಧಿ ಪ್ರಶಸ್ತಿಗಳಿಗೆ ಪುಸಕ್ತಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು ಸ್ಪರ್ಧೆಯ ದತ್ತಿ ಹೆಸರನ್ನು ಪುಸ್ತಕದ ಮೊದಲ ಒಳಪುಟದಲ್ಲಿ ಸ್ಪಷ್ಟವಾಗಿ ಸೂಚಿಸಬೇಕು. ತಮ್ಮ ಹೆಸರು, ವಿಳಾಸ, ದೂರವಾಣಿ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆಗಳನ್ನು ನಮೂದಿಸಬೇಕು. ಪಿಎಚ್.ಡಿ ಗ್ರಂಥಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಪರಿಶೀಲನೆಗೆ ಬಂದ ಪುಸ್ತಕಗಳನ್ನು ಹಿಂದಿರುಗಿಸಲಾಗುವುದಿಲ್ಲ.
ಹೆಚ್ಚಿನ ವಿವರಗಳಿಗೆ ಸ್ವ-ವಿಳಾಸದ ಸ್ಟಾಂಪ್ ಹಚ್ಚಿದ ಲಕೋಟೆ ಇಟ್ಟು ಪತ್ರ ಬರೆಯಬಹುದು.
ಆಸಕ್ತರು ಪ್ರತಿ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು -560018 (ದೂರವಾಣಿ ಸಂಖ್ಯೆ 080-26612991,080-26623584) ಗೆ ದಿನಾಂಕ 05-07-2021ರೊಳಗೆ ಕಳುಹಿಸಬೇಕು. ತಡವಾಗಿ ಬಂದ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..