ನವದೆಹಲಿ: ಜಮ್ಮು-ಕಾಶ್ಮೀರ ಮತ್ತು ಲಡಾಖ್ ಗಳನ್ನು ಪ್ರತ್ಯೇಕ ದೇಶಗಳಾಗಿ ತೋರಿಸುವ ತಪ್ಪು ಭೂಪಟವನ್ನು ಪ್ರದರ್ಶಿಸಿದ್ದ ಹಿನ್ನೆಲೆಯಲ್ಲಿ ಟ್ವಿಟರ್ ಇಂಡಿಯಾ ಆಡಳಿತ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ವಿವಿಧ ಐಪಿಸಿ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಟ್ವಿಟರ್ ವೆಬ್ ಸೈಟ್ ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ಪ್ರದರ್ಶಿಸಿದ್ದ ನಿಟ್ಟಿನಲ್ಲಿ ಟ್ವಿಟರ್ ಇಂಡಿಯಾ ಆಡಳಿತ ನಿರ್ದೇಶಕ ಮನೀಶ್ ಮಹೇಶ್ವರಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 505(2) ಮತ್ತು ಮಾಹಿತಿ ತಂತ್ರಜ್ಞಾನ(ತಿದ್ದುಪಡಿ) ಕಾಯ್ದೆ 2008ರ ಸೆಕ್ಷನ್ 74ರ ಅನ್ವಯ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ವರದಿ ಹೇಳಿದೆ.
ಬುಲಂದ್ ಶಹರ್ ನ ಬಜರಂಗದಳದ ಮುಖಂಡರು ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿ ವಿರುದ್ಧ ದೂರು ನೀಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಟ್ವಿಟರ್ ವೆಬ್ ಸೈಟ್ ನ ಕೆರೀಯರ್ ವಿಭಾಗದಲ್ಲಿ ಟ್ವೀಪ್ ಲೈಫ್ ಎಂಬ ಶೀರ್ಷಿಕೆಯಡಿ ಪ್ರತ್ಯೇಕ ದೇಶಗಳಾಗಿ ತೋರಿಸುವ ತಪ್ಪು ಭೂಪಟವನ್ನು ಪ್ರದರ್ಶಿಸಿತ್ತು.
ತಪ್ಪು ಭೂಪಟವನ್ನು ಪ್ರದರ್ಶಿಸಿದ್ದ ಟ್ವಿಟರ್ ವಿರುದ್ಧ ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಟ್ವಿಟರ್ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದು, ಈ ಬೆನ್ನಲ್ಲೇ ಟ್ವೀಪ್ ಲೈಫ್ ವೆಬ್ ಪೇಜ್ ಅನ್ನು ಸಂಪೂರ್ಣವಾಗಿ ತೆಗೆದು ಹಾಕಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..