ದೊಡ್ಡಬಳ್ಳಾಪುರ: ನೀಲಗಿರಿ ತೋಪಿನಲ್ಲಿ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ದಾಳಿ ನಡೆಸಿರುವ ದೊಡ್ಡಬೆಳವಂಗಲ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ನೇತೃತ್ವದ ತಂಡ 8 ಮಂದಿ ಜೂಜುಕೋರರನ್ನು ಬಂಧಿಸಿದೆ.
ದೊಡ್ಡಬೆಳವಂಗಲ ಪೋಲಿಸ್ ಠಾಣಾ ವ್ಯಾಪ್ತಿಯ ಐನಳ್ಳಿ ಗ್ರಾಮದ ನೀಲಗಿರಿ ತೋಪಿನಲ್ಲಿ ಅಂದರ್ ಬಾಹರ್ ಜೂಜಾಡುತ್ತಿದ್ದ ಅಡ್ಡೆಯ ಮೇಲೆ ಡಿವೈಎಸ್ಪಿ ಟಿ.ರಂಗಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಗಜೇಂದ್ರ ಹಾಗೂ ತಂಡದವರು ದಾಳಿ ಮಾಡಿ 8 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಜೂಜಾಡಲು ಬಳಸಲಾಗಿದ್ದ ರೂ 95,500 ನಗದು, ಒಂದು ಕಾರು, ನಾಲ್ಕು ಬೈಕ್ ಹಾಗೂ ಎಂಟು ಮೊಬೈಲ್ ಗಳನ್ನು ಅಮಾನತ್ತುಪಡಿಸಿಕೊಂಡಿದ್ದಾರೆ.
ಈ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..