ಬೆಂ.ಗ್ರಾ.ಜಿಲ್ಲೆ: 2021-22ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಬಾಲ ಕಾರ್ಮಿಕರ ಹಾಗೂ ಕಿಶೋರ ಕಾರ್ಮಿಕರ ಸಮೀಕ್ಷೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮೀಕ್ಷೆಯನ್ನು ಕೈಗೊಳ್ಳುವ ಸಂಸ್ಥೆಯು ಟ್ರಸ್ಟ್ ಅಥವಾ ಸೊಸೈಟಿ ಕಾಯ್ದೆಗಳ ಅಡಿ ನೊಂದಣಿಯಾಗಿರಬೇಕು. ಬಾಲ ಕಾರ್ಮಿಕ ಪದ್ದತಿಯ ನಿರ್ಮೂಲನೆಯಡಿ ಕಾರ್ಯನಿರ್ವಹಿಸಿದ ಸಂಸ್ಥೆಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು. ವಿವಿಧ ಇಲಾಖೆಗಳಲ್ಲಿ ಸಮೀಕ್ಷೆಗಳನ್ನು ಮಾಡಿದ ಸ್ವಯಂ ಸೇವಾ ಸಂಸ್ಥೆಗಳಿಗೆ ಆದ್ಯತೆ ನೀಡಲಾಗುವುದು. ಜಿಲ್ಲೆ ಅಥವಾ ತಾಲ್ಲೂಕಿನಾದ್ಯಂತ ಸಮೀಕ್ಷೆಯನ್ನು ನಡೆಸಲು ಪ್ರತಿ ತಾಲ್ಲೂಕಿಗೆ ಕನಿಷ್ಠ 12 ಜನ ಸಿಬ್ಬಂದಿ ಹಾಗೂ 01 ವಾಹನವನ್ನು ಹೊಂದಿರಬೇಕು. ಸಂಸ್ಥೆಯು ಕಳೆದ 2 ವರ್ಷಗಳ ಆಡಿಟ್ ವರದಿ ಮತ್ತು ವಾರ್ಷಿಕ ವರದಿಯನ್ನು ಸಲ್ಲಿಸಬೇಕು.
ಸಮೀಕ್ಷೆಯನ್ನು ಕೈಗೊಳ್ಳಲು ಆಸಕ್ತ ಸ್ವಯಂ ಸೇವಾ ಸಂಸ್ಥೆಗಳು ಅರ್ಜಿಯನ್ನು 2021ರ ಜುಲೈ 17ರೊಳಗಾಗಿ ಸಲ್ಲಿಸುವುದು.
ಅರ್ಜಿಯನ್ನು ಪಡೆಯಲು ಮತ್ತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ 102, ಬಾಲಕಾರ್ಮಿಕ ಶಾಖೆ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ: 080-29569998 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಅಧ್ಯಕ್ಷರಾದ ಕೆ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..