ದೊಡ್ಡಬಳ್ಳಾಪುರ: ಕೋವಿಡ್ ಸಂದರ್ಭದಲ್ಲಿ ರಾಜ್ಯ ಜನತೆಗೆ ಆಸರೆಯಾಗಿದ್ದು, ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸಬೇಕಿದೆ ಅಂತಹುದರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಆಗುವ ಕುರಿತ ಚರ್ಚೆಯೇ ಅಪ್ರಸ್ತುತ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದ್ದಾರೆ.
ಲಾಕ್‍ಡೌನ್ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವವರ ನೆರವಿಗಾಗಿ ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾಸೋಹ ಕಾರ್ಯಕ್ರಮ ಭಾಗವಹಿಸಿದ ಅವರು, ಆಹಾರ ಪೊಟ್ಟಣಗಳನ್ನು ವಿತರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಬಿಜೆಪಿ ಸರ್ಕಾರದ ವೈಫಲ್ಯಗಳಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಜನರಿಗೆ ವಿಶ್ವಾಸ ಹೆಚ್ಚುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಹುಮತ ಪಡೆದು ನಂತರ ಮುಖ್ಯಮಂತ್ರಿಗಳು ಯಾರು ಎನ್ನುವುದು ನಿರ್ಧಾರವಾಗಲಿದ್ದು, ಈಗ ಚರ್ಚೆ ಸಮಂಜಸವಲ್ಲ. ಈಗಾಗಲೇ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯರಾದಿಯಾಗಿ ಪಕ್ಷದ ವರಿಷ್ಟರು ಇದಕ್ಕೆ ಇತಿಶ್ರೀ ಹಾಡಿದ್ದು, ಇನ್ನು ಇದರ ಬಗ್ಗೆ ಮಾತನಾಡುವುದು ಬೇಡ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಜನರಿಗೆ ಮುಟ್ಟಿಸಿ, ಕಾಂಗ್ರೆಸ್ ಜನರಿಗೆ ಹತ್ತಿರವಾಗಬೇಕಿದೆ. ಕೋವಿಡ್ ಸಂಕಷ್ಟಕ್ಕೊಳಗಾದವರಿಗೆ ಶಾಸಕ ಟಿ.ವೆಂಕಟರಮಣಯ್ಯ ಅವರ ರೀತಿ ನೆರವಾಗುವುದು ಇಂದಿನ ಅಗತ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಟಿ.ವೆಂಕರಮಣಯ್ಯ, ಹಿರಿಯ ಮುಖಂಡರಾದ ಸೋಮರುದ್ರಶರ್ಮ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕೆ.ಪಿ.ಜಗನಾಥ್, ಮುಖಂಡರಾದ ಚುಂಚೇಗೌಡ, ಕೆ.ಎಂ.ಕೃಷ್ಣಮೂರ್ತಿ, ಕಸಬಾ ಬ್ಲಾಕ್ ಕಾಂಗ್ರೆಸ್ ಅಪ್ಪಿ ವೆಂಕಟೇಶ್, ಬಿ.ಜಿ.ಹೇಮಂತರಾಜ್, ಎಸ್.ಜಿ.ಸೋಮರುದ್ರಶರ್ಮ, ಮಾರಪ್ಪ, ಆಂಜನಮೂರ್ತಿ, ಬಿ.ಮುನಿರಾಜು ಇದ್ದರು. ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..