ದೊಡ್ಡಬಳ್ಳಾಪುರ: ತಾಲೂಕಿನಲ್ಲಿ “ಕೃಷಿ ಅಭಿಯಾನ” ಕಾರ್ಯಕ್ರಮವನ್ನು ಕೃಷಿ ಮತ್ತು ಎಲ್ಲಾ ಅಭಿವೃದ್ಧಿ ಇಲಾಖೆಗಳ ಸಮನ್ವಯದೊಂದಿಗೆ ರೈತರಿಗೆ ಕೃಷಿ ಮಾಹಿತಿಯನ್ನು ನೀಡುವ ಸಲುವಾಗಿ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಶೀರ್ಷಿಕೆಯಡಿ ಹಮ್ಮಿಕೊಳ್ಳಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ ತಿಳಿಸಿದ್ದಾರೆ.
ಸದರಿ “ ಕೃಷಿ ಅಭಿಯಾನ” ಕಾರ್ಯಕ್ರಮವನ್ನು ಜುಲೈ 1ರಿಂದ ಜುಲೈ 19ರ ವರೆಗೆ ಹೋಬಳಿ ಮಟ್ಟದಲ್ಲಿ ಮೂರು ದಿನಗಳ ಕಾಲ, ಪ್ರತಿ ಹೋಬಳಿಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳು ಒಳಗೊಂಡಂತೆ ಮೂರು ದಿನಗಳ ಕಾಲ ವ್ಯಾಪಕ ಪ್ರಚಾರ ಕಾರ್ಯದ ಜೊತೆಗೆ, ವಿಜ್ಞಾನಿಗಳು ಹಾಗೂ ಇತರೆ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡಗಳು ರೈತರೊಂದಿಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಈ ನಿಟ್ಟಿನಲ್ಲಿ ಪ್ರಚಾರ ವಾಹನಕ್ಕೆ ನಗರದ ಕೃಷಿ ಇಲಾಖೆ ಆವರಣದಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಜುಲೈ 1ರಂದು ಚಾಲನೆ ನೀಡಲಿದ್ದಾರೆ. ಈ ವಾಹನ ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಿ ಪ್ರಚಾರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..