ದೊಡ್ಡಬಳ್ಳಾಪುರ: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಶಿಲೀಂಧ್ರ (ಬ್ಲಾಕ್ ಫಂಗಸ್) ಶಸ್ತ್ರಚಿಕಿತ್ಸೆಯನ್ನು ತಜ್ಞ ವೈದ್ಯರ ತಂಡದಿಂದ ಯಶಸ್ವಿಯಾಗಿ ನಡೆಸಿ ರಾಜ್ಯಕ್ಕೆ ಮಾದರಿಯಾಗಿದೆ.
ಕೋವಿಡ್ ಸೋಂಕಿನಿಂದ ಗುಣಮುಖರಾಗಿದ್ದ ನಂತರ ಬ್ಲಾಕ್ ಫಂಗಸ್ ಗೆ ಒಳಗಾಗಿದ್ದ ನಗರದ ಸುಮಾರು 56 ವರ್ಷದ ಪುರುಷರಿಗೆ ಡಾ.ಸಂತೋಷ್ ನೇತೃತ್ವದ ವೈದ್ಯರ ತಂಡ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.
ಈ ಶಸ್ತ್ರಚಿಕಿತ್ಸೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಡಾ.ರಮೇಶ್, ಡಾ.ಅರುಣ್, ಡಾ.ರಾಜು, ಡಾ.ಪ್ರೇಮಲತಾ, ಡಾ.ಅರ್ಜುನ್ ಹಾಗೂ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ ಎನ್ನಲಾಗಿದೆ.
ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಭಾಗವಹಿಸಿದ್ದ ತಜ್ಞರನ್ನು ಶಾಸಕ ಟಿ.ವೆಂಕಟರಮಣಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದ ಬ್ಲಾಕ್ ಫಂಗಸ್ ಶಸ್ತ್ರಚಿಕಿತ್ಸೆ ರಾಜ್ಯದಲ್ಲಿ ಪ್ರಥಮ ಬಾರಿಗೆ ತಾಲೂಕು ಮಟ್ಟದಲ್ಲಿ ನಡೆದಿರುವುದು ದೊಡ್ಡಬಳ್ಳಾಪುರದ ಹೆಮ್ಮೆಯಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..