ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು 2021ರ ಜುಲೈ 01 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ 3.00 ರಿಂದ 4.00 ಗಂಟೆಯವರೆಗೆ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಸಚಿವರು ಸಂಜೆ 4.00 ಗಂಟೆಯಿಂದ 5.00 ಗಂಟೆಯವರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.
ತದನಂತರ ಸಂಜೆ 5.00 ಗಂಟೆಗೆ ದೇವನಹಳ್ಳಿ ರಸ್ತೆ ಮೂಲಕ ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಡಾ. ಬಿ.ಉದಯಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಸಂಗ್ರಹ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..