ನವದೆಹಲಿ: ಜಿಎಸ್‌ಟಿ ತೆರಿಗೆ ವ್ಯವಸ್ಥೆ ಅನುಷ್ಠಾನಗೊಂಡು 4 ವರ್ಷಗಳು ಪೂರ್ಣಗೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಇದೊಂದು ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಜಿಎಸ್‌ಟಿ ಭಾರತದ ಆರ್ಥಿಕ ವ್ಯವಸ್ಥೆಯಲ್ಲಿ ಒಂದು ಮೈಲಿಗಲ್ಲಾಗಿದೆ. ಇದು ತೆರಿಗೆಗಳ ಸಂಖ್ಯೆ, ಅನುಸರಣೆ ಹೊರೆ ಮತ್ತು ಸಾಮಾನ್ಯ ಜನರ ಮೇಲಿನ ಒಟ್ಟಾರೆ ತೆರಿಗೆ ಹೊರೆಯನ್ನು ಕಡಿಮೆ ಮಾಡಿದೆ. ಜೊತೆಗೆ ಪಾರದರ್ಶಕತೆ, ಅನುಸರಣೆ ಮತ್ತು ಒಟ್ಟಾರೆ ಸಂಗ್ರಹವನ್ನು ಗಮನಾರ್ಹವಾಗಿ ಹೆಚ್ಚಿಸಿದೆ. #4YearsofGST” ಎಂದು ಹೇಳಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..