ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು
ಪತ್ರಿಕಾ ದಿನಾಚರಣೆಯ ಅಂಗವಾಗಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಪತ್ರಿಕಾ ದಿನದ ಶುಭಾಶಯಗಳನ್ನು ತಿಳಿಸಿದರು.
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಜಿಲ್ಲಾಡಳಿತಕ್ಕೆ ಸಹಕಾರ ನೀಡಿದ ಮಾಧ್ಯಮದವರ ಸೇವೆಯನ್ನು ಶ್ಲಾಘಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್‌ಕುಮಾರ್, ಕಚೇರಿ ಸಹಾಯಕರಾದ ರಾಜೀವಲೋಚನ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಾವತಿ.ಜೆ ಸೇರಿದಂತೆ ಜಿಲ್ಲೆಯ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮದ ಪ್ರತಿನಿಧಿಗಳು ಉಪಸ್ಥಿತರಿದ್ದರು ಎಂದು ವಾರ್ತಾ ಇಲಾಖೆಯ ವರದಿ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..