ರಾಷ್ಟ್ರೀಯ ವೈದ್ಯಕೀಯ ದಿನಾಚರಣೆ ಅಂಗವಾಗಿ ದೊಡ್ಡಬಳ್ಳಾಪುರದಲ್ಲಿ ವೈದ್ಯರಿಗೆ ಸನ್ಮಾನ / ವೈದ್ಯರ ಅವಹೇಳನ ಸಲ್ಲದೆಂದ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್

ದೊಡ್ಡಬಳ್ಳಾಪುರ: ಜನ ಸೇವೆಗಾಗಿ ಹಗಲಿರುಳು ಶ್ರಮಿಸುವ ವೈದ್ಯರ ಶ್ರಮವನ್ನು ಹಾಗೂ ವೈದ್ಯಕೀಯ ಕ್ಷೇತ್ರದ ಮಹತ್ವವನ್ನು ವರ್ಷದ ಒಂದು ದಿನವಾದರೂ ಜನತೆಗೆ ತಿಳಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್ ಕೆ.ನಾಯಕ್ ಹೇಳಿದರು.

ರಾಷ್ಟ್ರೀಯ ವೈದ್ಯಕೀಯ ದಿನಾಚರಣೆ ಅಂಗವಾಗಿ ನಗರದ ಒಕ್ಕಲಿಗರ ಸಮುದಾಯದ ಭವನದಲ್ಲಿ ಆಯೋಜಿಸಿದ್ದ ವೈದ್ಯರಿಗೆ ಅಭಿನಂದನೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೋವಿಡ್ ಸಂಧರ್ಭದಲ್ಲಿ ವೈದ್ಯಕೀಯ ಕ್ಷೇತ್ರದ ಸಿಬ್ಬಂದಿಗಳ ತ್ಯಾಗ – ಬಲಿದಾನ ಅಪಾರವಾಗಿದೆ. ವಯಕ್ತಿಕ ಕುಟುಂಬವ ಬದಿಗೊತ್ತಿ ಕರೊನಾ ವಿರುದ್ದ ಅವರು ನಡೆಸಿದ ಹೋರಾಟ ಪ್ರಶಂಸನೀಯವಾಗಿದೆ. ಕರೊನಾ ವಿರುದ್ದ ಸರ್ಕಾರ ಹಾಗೂ ವೈದ್ಯಕೀಯ ಕ್ಷೇತ್ರ ಒಟ್ಟಾಗಿ ಶ್ರಮಿಸಿದರು ವೈದ್ಯಕೀಯ ಕ್ಷೇತ್ರದ ಪಾತ್ರ ಸರ್ಕಾರಕ್ಕಿಂತ ಹೆಚ್ಚಾಗಿದೆ ಎಂದರು.

ವೈದ್ಯರ ಅವಹೇಳನ‌ ಸಲ್ಲದು: ಇತ್ತೀಚಿನ ದಿನಗಳಲ್ಲಿ ಚಿತ್ರಗಳಲ್ಲಿ, ಸಾಮಾಜಿಕ ಜಾಲತಾಣದಲ್ಲಿ ವೈದ್ಯರ ಅವಹೇಳನಕಾರಿಯಾಗಿ ಚಿತ್ರಿಸುವುದು, ಅವಹೇಳನವಾಗಿ ಮಾತುಗಳು ಆಡುವುದನ್ನು ಎಲ್ಲರೂ ಒಟ್ಟಾಗಿ ಖಂಡಿಸಬೇಕಿದೆ. ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ವೈದ್ಯಕೀಯ ಕ್ಷೇತ್ರವನ್ನು ದೂಶಿಸುವುದು ಸಲ್ಲದು ಎಂದರು.

ತಹಶೀಲ್ದಾರ್ ಟಿ.ಎಸ್.ಶಿವರಾಜ್ ಮಾತನಾಡಿ, ವೈದ್ಯರ ಮಹತ್ವ ಈ ಹಿಂದಿಗಿಂತಲೂ ಕರೊನಾ ಸಂದರ್ಭದಲ್ಲಿ ಜನರಿಗೆ ಹೆಚ್ಚಾಗಿ ಅರಿವಾಗಿದೆ. ತಾಲೂಕಿನ ವೈದ್ಯಕೀಯ ಸಿಬ್ಬಂದಿಗಳು ಮೊದಲನೆ ಹಾಗೂ ಎರಡನೇ ಅಲೆಯಲ್ಲಿ ಬಹಳಷ್ಟು ಕಾಳಜಿವಹಿಸಿ ಕಾರ್ಯನಿರ್ವಹಿಸಿದ್ದಾರೆ. ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಕೋವಿಡ್ ನಿಗ್ರಹಕ್ಕೆ ನೀಡಿದ ಒತ್ತಡದ ನಡುವೆಯೂ ಮಾಡಿದ ಸೇವೆ ಪ್ರಶಂಸನೀಯ. ಇದೇ ರೀತಿ ತಾಲೂಕಿನಲ್ಲಿ ಸೇವೆಯನ್ನು ಮುಂದುವರೆಸಬೇಕೆಂದು ಮನವಿ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ವೈದ್ಯಕೀಯ ಸಿಬ್ಬಂದಿಗಳು ತಮ್ಮ ಕುಟುಂಬವ ಬದಿಗೊತ್ತಿ ಕರೊನಾ ವಾರಿಯರ್ಸ್‌ ಗಳಾಗಿ ಸಲ್ಲಿಸಿರುವ ಸೇವೆಗೆ ಎಷ್ಟು ಕೃತಜ್ಞತೆ ಸಲ್ಲಿಸಿದರು ಸಾಲದು.

ಕೋವಿಡ್-19 ಕರ್ತವ್ಯದ ವೇಳೆ ಮೃತಪಟ್ಟ ವೈದ್ಯಕೀಯ ಸಿಬ್ಬಂದಿಗಳ ಕುಟುಂಬಕ್ಕೆ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗವನ್ನು ಸರ್ಕಾರ ತ್ವರಿತವಾಗಿ ನೀಡಬೇಕೆಂದು ಒತ್ತಾಯಿಸಿದ ಟಿ.ವೆಂಕಟರಮಣಯ್ಯ, ತಾಲೂಕಿನಲ್ಲಿ ಯಾವುದೇ ವೈದ್ಯಕೀಯ ವಿದ್ಯಾಲಯ ಇಲ್ಲವಾಗಿದ್ದು,

ಇದನ್ನು ಗಮನಿಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವದಿಯಲ್ಲಿ ಜಿಲ್ಲಾಸ್ಪತ್ರೆ ನೀಡಿದ್ದರು ಹಾಗೂ ಸಮ್ಮಿಶ್ರ ಸರ್ಕಾರದ ಅವದಿಯಲ್ಲಿ 90 ಕೋಟಿ ರೂಗಳ ಅನೋದನೆಯಾಗಿತ್ತು. ಆದರೆ ಇದು ಕಳೆದ ಎರಡು ವರ್ಷದಿಂದ ಸಂಪುಟ ನಿರ್ಣಯವಾಗದೆ ಉಳಿದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತ್ವರಿತವಾಗಿ ಸಂಪುಟ ನಿರ್ಣಯವನ್ನು ಕೈಗೊಂಡು ತಾಲೂಕಿನ ಜನರ ವೈದ್ಯಕೀಯ ಸೌಲಭ್ಯಕ್ಕೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು.

ಮೂರನೇ ಅಲೆ ಆತಂಕ: ಎರಡನೇ ಅಲೆಯ ಆತಂಕ ಸ್ವಲ್ಪ ಮಟ್ಟಿಗೆ ತಾಲೂಕಿನಲ್ಲಿ ಕಡಿಮೆಯಾಗಿದ್ದು, ಮೂರನೆ ಅಲೆಯ ಆತಂಕ ಎದುರಿಗಿದೆ. ಈ ನಿಟ್ಟಿನಲ್ಲಿ ವೈದ್ಯರು ಸಜ್ಜಾಗಬೇಕು ಹಾಗೂ ಸಾರ್ವಜನಿಕರು ಸೋಂಕಿಗೆ ಒಳಗಾಗದಂತೆ ಕಾಳಜಿವಹಿಸಬೇಕಿದೆ ಎಂದರು.

ಬ್ಲಾಕ್ ಫಂಗಸ್ ಯಶಸ್ವಿ ಚಿಕಿತ್ಸೆ: ಬ್ಲಾಕ್ ಫಂಗಸ್ ಚಿಕಿತ್ಸೆಗೆ ತಾಲೂಕಿನ ಜನತೆ ಬೆಂಗಳೂರನ್ನು ಅವಲಂಬಿಸಬೇಕಿತ್ತು. ಈ ಕುರಿತು ಡಾ.ಸಂತೋಷ್ ಹಾಗೂ ಇತರ ವೈದರ ನಡುವೆ ನಡೆಸಿದ ಚರ್ಚೆಯ ವೇಳೆ ಅಗತ್ಯ ಸಾಧನಗಳ ದೊರಕಿದರೆ ತಾಲೂಕಿನಲ್ಲಿಯೇ ಶಸ್ತ್ರಚಿಕಿತ್ಸೆ ಮಾಡಲು ಸಿದ್ದವೆಂದರು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಸಹಕಾರದಿಂದ ಸಾಧನಗಳು ತಾಲೂಕಿಗೆ ದೊರಕಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿರುವುದು ತಾಲೂಕಿಗೆ ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ ಸುಮಾರು 60 ವೈದ್ಯರನ್ನು ಸನ್ಮಾನಿಸಲಾಯಿತು.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ಕೊಡಿಗೇಹಳ್ಳಿ ಗ್ರಾಪಂ ಸದಸ್ಯೆ ನಾಗರತ್ನಮ್ಮ ಮತ್ತಿತರರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!