ದೊಡ್ಡಬಳ್ಳಾಪುರ: ಕರೊನಾ ಸೊಂಕಿನ ಹಾವಳಿ ಮುಗಿದ ನಂತರ ತಾಲೂಕಿನಾಧ್ಯಂತ ಗ್ರಾಮ ಸಭೆ ನಡೆಸಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
ನಗರದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ಆಯೋಜಿದ್ದ ಕೃಷಿ ಅಭಿಯಾನ ಕಾರ್ಯಕ್ರಮದ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳ ಕುರಿತು ಜನರಿಗೆ ತಿಳಿಸಲು ಕೋವಿಡ್ ಸೋಂಕಿನ ಹಾವಳಿ ಮುಗಿದ ನಂತರ ಗ್ರಾಮಸಭೆಗಳನ್ನು ಆಯೋಜಿಸಲಾಗುತ್ತಿದ್ದು, ಇಲಾಖೆವಾರು ಮಾಹಿತಿ ನೀಡಲು ಅಧಿಕಾರಿಗಳು ಸಿದ್ದರಾಗುವಂತೆ ಸೂಚಿಸಿದರು.
ಕೋವಿಡ್ ತಡೆಗಟ್ಟಲು ಘೋಷಿಸಲಾದ ಲಾಕ್‍ಡೌನ್ ಕಾರಣ ಹೂ ಬೆಳೆಗಾರರು, ತರಕಾರಿ ಬೆಳೆಗಾರರು ಮಾರುಕಟ್ಟೆ ಸೌಲಭ್ಯವಿಲ್ಲದೆ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದರು ಸರ್ಕಾರಗಳು ಸ್ಪಂದಿಸುತ್ತಿಲ್ಲ.
ರಾಜ್ಯ – ಕೇಂದ್ರ ಸರ್ಕಾರಗಳು ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ ವಿತರಿಸುವಲ್ಲಿ ಸಹ ವಿಫಲವಾಗಿವೆ.ಎತ್ತಿನಹೊಳೆ ಯೋಜನೆ ಸೇರಿದಂತೆ ಯಾವುದೇ ನೀರಾವರಿ ಯೋಜನೆ ಅನುಷ್ಠಾನ ವಿಫಲವಾಗಿದೆ. ದೇಶದ ಪರಿಸ್ಥಿತಿ ಅದೋಗತಿಗೆ ತಲುಪಿದ್ದು, ಬೆಲೆ ಏರಿಕೆ ಜನತೆಯನ್ನು ತೀವ್ರವಾಗಿ ಕಾಡುತ್ತಿದೆ.
ಸರ್ಕಾರ ಹೆಸರಿಗೆ ಮಾತ್ರ ನೆರವಿನ ಯೋಜನೆ ಘೋಷಣೆ ಮಾಡಿದೆಯೇ ಹೊರತು ಫಲಾನುಭವಿಗಳಿಗೆ ತಲುಪುತ್ತಿಲ್ಲ, ಕೋವಿಡ್ ಪರಿಹಾರ ಇದುವರೆಗೂ ತಲುಪಿಲ್ಲ ಎಂಬ ಅಳಲು ಸಂಕಷ್ಟಕ್ಕೆ ಒಳಗಾಗಿರುವವರದ್ದಾಗಿದೆ. ಈ ಕುರಿತು ಮುಂದಿನ ದಿನಗಳಲ್ಲಿ ಜನತೆ ಚಿಂತಿಸಬೇಕಿದೆ ಎಂದರು.
ಈ ವೇಳೆ ರೈತರಿಗೆ ಉಚಿತ ಬಿತ್ತನೆ ಬೀಜ ವಿತರಿಸಲಾಯಿತು. ಹಾಗೂ ಇಲಾಖೆ ಕಾರ್ಯಕ್ರಮಗಳ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಈ ವೇಳೆ ಕೃಷಿಕ ಸಮಾಜ ಜಿಲ್ಲಾ ಪ್ರತಿನಿಧಿ ನಾಗರಾಜ್, ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಅಂಜನೇಗೌಡ, ಉಪಾಧ್ಯಕ್ಷ ಜಯರಾಂ, ನಿರ್ದೆಶಕರಾದ ರಾಮಾಂಜಿನಪ್ಪ, ಮುನಿಯಪ್ಪ ತೋಟಗಾರಿಕೆ ಹಿರಿಯ ಸಹಾಯಕ ನಿರ್ದೇಶಕ ಶ್ರೀನಿವಾಸ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಪಶುಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಆಂಜಿನಪ್ಪ, ಕೆವಿಕೆ ವಿಜ್ಞಾನಿ ಡಾ.ವೆಂಕಟೇಗೌಡ, ಪಶು ಸಂಗೋಪನೆ ಇಲಾಖೆ ಮುಖ್ಯ ವೈದ್ಯಾಧಿಕಾರಿ ಡಾ.ವಿಶ್ವನಾಥ್, ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ, ತಾಂತ್ರಿಕ ಅಧಿಕಾರಿ ರೂಪ, ಕೃಷಿ ಅಧಿಕಾರಿಗಳಾದ ಕೆ.ಎ.ಹರೀಶ್ ಕುಮಾರ್, ಎನ್.ಗೀತಾ, ನವೀನ್ ಕುಮಾರ್, ಸಹಾಯಕ ಕೃಷಿ ಅಧಿಕಾರಿಗಳಾದ ಲಿಂಗಯ್ಯ, ಶಶಿಧರ್, ನಾಗರಾಜು, ಪರಶಿವಮೂರ್ತಿ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..