ಚಿಕ್ಕಬಳ್ಳಾಪುರ:14 ವರ್ಷದ ಅಪ್ರಾಪ್ತ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯಲ್ಲೇ ಇರುತ್ತಿದ್ದ ಬಾಲಕಿ ಮೇಲೆ ಅದೇ ಗ್ರಾಮದ 07 ಮಂದಿ ಯುವಕರು ನಿರಂತರ ವಾಗಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದ್ದು. ಅಪ್ರಾಪ್ತ ಬಾಲಕಿ ಆರೋಗ್ಯದ ಮೇಲೆ ಪ್ರಭಾವ ಆಗಿ ಆಸ್ಪತ್ರೆಗೆ ತೆರಳಿದಾಗ ಬಾಲಕಿ 04 ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿ ಹೇಳಿಕೆ ಮೇರೆಗೆ 07 ಮಂದಿ ವಿರುದ್ದ ದೂರು ದಾಖಲಿಸಲಾಗಿದೆ. ಸದ್ಯ ಮೂವರನ್ನು ಪೊಲೀಸರು ಬಂಧಿಸಿದ್ದು ಉಳಿದ ನಾಲ್ವರ ವಶಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ. ಬಾಲಕಿ ಸದ್ಯ ಪೊಲೀಸರ ವಶದಲ್ಲಿದ್ದು…ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.(ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..