ದೊಡ್ಡಬಳ್ಳಾಪುರ: ನಗರದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ(ಎನ್‌ಸಿಪಿಸಿಆರ್) ಸದಸ್ಯ ಡಾ.ಆರ್.ಜಿ.ಆನಂದ್ ಭೇಟಿ ನೀಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಯೋಜಿಸಿದ್ದ ಹಾಲುಣಿಸುವ ತಾಯಂದಿರಿಗೆ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕೋವಿಡ್-19 ಮೂರನೇ ಅಲೆ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಸಾಧ್ಯತೆಯಿರುವ ಹಿನ್ನೆಲೆ, ಮಕ್ಕಳಿಗೆ ಸೋಂಕು ಹರಡದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.
ನಂತರ ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಿದರು.
ತಾಲ್ಲೂಕು ಅರೊಗ್ಯಾಧಿಕಾರಿ ಡಾ. ಪರಮೇಶ್ವರ, ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅನಿತಾಲಕ್ಷ್ಮೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶನಾಲಯದ ಸಹಾಯಕ ನಿರ್ದೇಶಕ ಮೋಹನ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..