ರೈತರು ಸ್ವ-ಇಚ್ಛೆಯಿಂದ ನೀಲಗಿರಿ ತೆರವುಗೊಳಿಸುವಂತೆ ಅರಿವು ಮೂಡಿಸಿ: ಸಂಸದ ಬಿ.ಎನ್.ಬಚ್ಚೇಗೌಡ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ಸ್ವ-ಇಚ್ಛೆಯಿಂದ ನೀಲಗಿರಿ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಅಂದೋಲನದ ಮೂಲಕ ರೈತರಲ್ಲಿ ಅರಿವು ಮೂಡಿಸಿ, ತ್ವರಿತವಾಗಿ ತೆರವುಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ “2021-22ನೇ ಸಾಲಿನ ತ್ರೈಮಾಸಿಕ ದಿಶಾ ಪ್ರಗತಿ ಪರಿಶೀಲನಾ ಸಭೆಯ” ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆರೆಯಂಗಳಗಳಲ್ಲಿ ಬೆಳೆದಿರುವ ಜಾಲಿ ಮರಗಳನ್ನು ಹರಾಜು ಪ್ರಕ್ರಿಯೆ ಮೂಲಕ ತೆರವುಗೊಳಿಸಿ, ಅದರಿಂದ ಬರುವ ಆದಾಯವನ್ನು ಸ್ಥಳೀಯ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಸಂದಾಯ ಮಾಡಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ 337 ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಟ್ಯಾಂಕರ್ ಹಾಗೂ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರನ್ನು ಸರಬರಾಜು ಮಾಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸರಬರಾಜಿನಲ್ಲಿ ಸಮಸ್ಯೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಶಾಸಕರು ಸರ್ಕಾರದ ಬಳಿ ಮನವಿ ಸಲ್ಲಿಸಿ, ಹೆಚ್ಚಿನ ಅನುದಾನ ತರುವ ಮೂಲಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಕೋವಿಡ್ ಎರಡನೇ ಅಲೆಯ ಪ್ರಕರಣಗಳು ತೀವ್ರವಾಗಿ ಕುಸಿಯುತ್ತಿದ್ದು, ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.2.84% ದಾಖಲಾಗಿದೆ ಎಂದರಲ್ಲದೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೈಗೊಂಡ ಹಲವಾರು ಕ್ರಮಗಳಿಂದಾಗಿ ಕೋವಿಡ್ ಪ್ರಕರಣಗಳ ಪ್ರಮಾಣ ಕಡಿಮೆಯಾಗುತ್ತಿದ್ದು, ಆರ್ಥಿಕ ಸ್ಥಿತಿಗತಿ ಸುಧಾರಿಸುವ ನಿಟ್ಟಿನಲ್ಲಿ ಅನ್‌ಲಾಕ್ ಮಾಡಲಾಗುತ್ತಿದೆ ಎಂದರು.

ಕೋವಿಡ್ ಸೋಂಕಿನ ಕುರಿತು ಸಾರ್ವಜನಿಕರು ನಿರ್ಲಕ್ಷ್ಯ ವಹಿಸದೆ, ಎಚ್ಚರಿಕೆಯಿಂದ ಇರಬೇಕು ಎಂದರಲ್ಲದೆ, ಸಾರ್ವಜನಿಕರು ಎಚ್ಚರ ತಪ್ಪಿದರೆ ಅಪಾಯ ಎದುರಾಗುವ ಸಾಧ್ಯತೆ ಇರುವುದರಿಂದ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು. 

ಎಚ್.ಎನ್. ವ್ಯಾಲಿ ಹಾಗೂ ಎತ್ತಿನಹೊಳೆ ಯೋಜನೆಗಳು ಶೀಘ್ರವಾಗಿ ಪೂರ್ಣಗೊಳ್ಳಬೇಕೆಂಬುದು ನಮ್ಮ ಆಶಯ ಎಂದರಲ್ಲದೆ, ಈ ಯೋಜನೆಗಳು ಪೂರ್ಣಗೊಂಡಲ್ಲಿ ಜಿಲ್ಲೆಯ ಹಲವು ಕೆರೆಗಳಿಗೆ ನೀರು ತುಂಬಲಿದ್ದು, ಅಂತರ್ಜಲದ ಮರುಪೂರಣವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎಂದರು. 

ಜಿಲ್ಲೆಯು ಸ್ವಚ್ಛ ಭಾರತ್ ಯೋಜನೆಯಡಿ ನಗರ ಪ್ರದೇಶಗಳಲ್ಲಿ ವೈಯಕ್ತಿಕ ಹಾಗೂ ಸಾರ್ವಜನಿಕ ಶೌಚಾಲಯಗಳ ನಿರ್ಮಾಣದಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿದ್ದು, ನಗರ ಸ್ಥಳೀಯ ಸಂಸ್ಥೆಗಳು ಅರಿವು ಮೂಡಿಸುವುದು ಹಾಗೂ ಮಾಹಿತಿ ನೀಡುವಲ್ಲಿ ಉತ್ತಮ ಪ್ರಗತಿ ಸಾಧಿಸಿದೆ ಎಂದರು. 

ಎಸ್.ಎಸ್.ಎಲ್.ಸಿ ಪರೀಕ್ಷೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೋವಿಡ್ ನಿಯಮಾನುಸಾರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪರೀಕ್ಷೆಗೆ ಅಗತ್ಯವಾದ ಮಾಹಿತಿ ನೀಡಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ, ನೀಲಗಿರಿ ಹಾಗೂ ಅಕೇಶಿಯಾ ಮರಗಳನ್ನು ತೆರವುಗೊಳಿಸುವುದರಿಂದ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ, ನರೇಗಾ ಯೋಜನೆಯಡಿ ಒಂದು ಎಕರೆಗೆ ರೂ.2.50 ಲಕ್ಷ ಹಣ ನೀಡಲಾಗುವುದು ಎಂದು ಮಾಹಿತಿ ನೀಡಿದರು. 

ನರೇಗಾ ಯೋಜನೆಯಡಿ ಪ್ರಸಕ್ತ ಹಣಕಾಸು ವರ್ಷದಲ್ಲಿ 4.78 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿದ್ದು, ಇಲ್ಲಿಯವರೆಗೂ 1,10,226 ಮಾನವ ದಿನಗಳನ್ನು ಪೂರೈಸಲಾಗಿದೆ. ಶೇ 23%ರಷ್ಟು ಕಾಮಗಾರಿಯನ್ನು ರೂ.16.95 ಲಕ್ಷ ವೆಚ್ಚ ಮಾಡುವ ಮೂಲಕ ಪೂರ್ಣಗೊಳಿಸಲಾಗಿದೆ. ಕಿಚನ್ ಗಾರ್ಡನ್, ವೈಯಕ್ತಿಕ ಶೌಚಾಲಯ ಸೇರಿದಂತೆ ಹಲವಾರು ಕೆಲಸಗಳನ್ನು ನರೇಗಾ ಯೋಜನೆಯಡಿ ಮಾಡಬಹುದಾಗಿದೆ ಎಂದರು. 

ಇಲ್ಲಿಯವರೆಗೂ ಜಿಲ್ಲೆಯಲ್ಲಿ 98.213 ಜಾಬ್ ಕಾರ್ಡ್‌ಗಳನ್ನು ವಿತರಣೆ ಮಾಡಲಾಗಿದ್ದು, ಇದರಲ್ಲಿ ಮಹಿಳೆಯರದೇ ಸಿಂಹ ಪಾಲು ಎಂದು ತಿಳಿಸಿದ ಅವರು, ಜನರು ವೈಯಕ್ತಿಕ ಕಾಮಗಾರಿಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ ಎಂದು ತಿಳಿಸಿದರು. 

‌ಜಿಲ್ಲೆಯಲ್ಲಿ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಹೊಸಕೋಟೆ ತಾಲ್ಲೂಕಿನ ಕುಡಿಯುವ ನೀರಿಗಾಗಿ ವಿಶೇಷ ಅನುದಾನ ತಂದಿದ್ದು, ಅದರಂತೆಯೇ ಉಳಿದ ಮೂರು ತಾಲ್ಲೂಕುಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ವಿಶೇಷ ಅನುದಾನ ತರುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು. 

ಸ್ವಚ್ಛ ಭಾರತ್ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ ಈಗಾಗಲೇ ಹಸಿ ಹಾಗೂ ಒಣ ತ್ಯಾಜ್ಯವನ್ನು ಪ್ರತ್ಯೇಕವಾಗಿ ವಿಂಗಡಣೆ ಮಾಡಲಾಗುತ್ತಿದ್ದು, ವಿಲೇವಾರಿಗೆ ಯಾವುದೇ ತೊಂದರೆ ಇಲ್ಲವಾದರೂ ದೇವನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ ಇರುವುದರಿಂದ  ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಈಗಾಗಲೇ ತ್ಯಾಜ್ಯ ವಿಲೇವಾರಿಗೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದರು. 

ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ದೇವನಹಳ್ಳಿ ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಹೆಚ್ಚಿನ ಹಣಕಾಸು ನೆರವು ನೀಡುವಂತೆ ಅಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದರಲ್ಲದೆ, ಈ ಕುರಿತು ಸರ್ಕಾರದ ಗಮನಕ್ಕೆ ತರುವ ಕಾರ್ಯವನ್ನು ತಾವು ಮಾಡುವುದಾಗಿ ತಿಳಿಸಿದರು. 

ದೇವನಹಳ್ಳಿ ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ಇದ್ದು, ತ್ಯಾಜ್ಯವನ್ನು ಡೀಮ್ಡ್ ಅರಣ್ಯದಲ್ಲಿ ವಿಲೇವಾರಿ ಮಾಡಬಹುದೇ ಎಂದು ಅಧಿಕಾರಿಗಳು ಪರಿಶೀಲನೆ ಮಾಡಬೇಕು ಎಂದರಲ್ಲದೆ, ಇದರಿಂದ ಶಾಶ್ವತವಾಗಿ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು ಹಾಗೂ ತಾಲ್ಲೂಕಿನಲ್ಲಿ ಈಗಾಗಲೇ ವಿದ್ಯುತ್ ಚಿತಾಗಾರ ನಿರ್ಮಿಸಲು ಜಾಗ ಗುರುತಿಸಲಾಗಿದ್ದು, ಚಿತಾಗಾರ ನಿರ್ಮಾಣಕ್ಕೆ 3 ಕೋಟಿ ಹಣ ಮೀಸಲಿಡಲಾಗಿದೆ ಎಂದರು. 

ಸಭೆಯಲ್ಲಿ ದಿಶಾ ಸಮಿತಿ ಸದಸ್ಯರು, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಮುನಿಕೃಷ್ಣಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಪ್ಪೇಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೃಷ್ಣಪ್ಪ, ಡಿಡಿಪಿಐ ಗಂಗಮಾರೇಗೌಡ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ.. ಅಂತಿಮ ಕಣದಲ್ಲಿ ಇಬ್ಬರು ಅಭ್ಯರ್ಥಿಗಳು

ಗುಡ್ಮಾರ್ನಿಂಗ್ ನ್ಯೂಸ್: ದೊಡ್ಡಬಳ್ಳಾಪುರ ನಗರಸಭೆ ಉಪಚುನಾವಣೆ.. ಅಂತಿಮ ಕಣದಲ್ಲಿ ಇಬ್ಬರು ಅಭ್ಯರ್ಥಿಗಳು

ದೊಡ್ಡಬಳ್ಳಾಪುರ: ನಗರಸಭೆಯ 21 ನೇ ವಾರ್ಡ್ ನ ಹೇಮಾವತಿಪೇಟೆ ವಾರ್ಡ್ನ ಉಪ ಚುನಾವಣೆಗೆ (By-election) ಒಟ್ಟು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು.

[ccc_my_favorite_select_button post_id="117305"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]