ಬೆಂಗಳೂರಿನ ಯುನೈಟೆಡ್‌ ಆಸ್ಪತ್ರೆಯಲ್ಲಿ ಸ್ಪುಟ್ನಿಕ್‌-ವಿ ಲಸಿಕೆ ಲಭ್ಯ / ರಾಜ್ಯದ ಮೊದಲ ಸ್ಪುಟ್ನಿಕ್-ವಿ ಲಸಿಕಾಕರಣ ಅಭಿಯಾನ ಪ್ರಾರಂಭ

ಬೆಂಗಳೂರು: ಕರ್ನಾಟಕ ರಾಜ್ಯದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಇಂದಿನಿಂದಲೇ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ. 

ಕರೊನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿ ಯ ರಾಜ್ಯದ ಮೊದಲ ಲಸಿಕಾ ಅಭಿಯಾನ ಇದಾಗಿದ್ದು ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದೆ. ಪ್ರತಿವಾರ ನಮ್ಮ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ ಭರವಸೆಯನ್ನು ರೆಡ್ಡಿ ಲ್ಯಾಬೋರೇಟರಿ ನೀಡಿದೆ. ಈ ಲಸಿಕೆಯ ಸ್ಟೋರೇಜ್‌ ಗೆ ಅಗತ್ಯವಿರುವ ಅತ್ಯಾಧುನಿಕ ಫ್ರೀಜರ್‌ಗಳನ್ನು ಇಲ್ಲಿ ಅಳವಡಿಸಿಲಾಗಿದ್ದು, ಮೈನಸ್‌ – 30 ಡಿಗ್ರಿ ಸೆಲ್ಸಿಯಸ್‌ ನಷ್ಟು ತಾಪಾಂಶದಲ್ಲಿ ಲಸಿಕೆಗಳನ್ನು ಸಂಗ್ರಹಿಸಲಾಗಿದೆ. ಯುನೈಟೆಡ್‌ ಬ್ರದರ್ಸ್‌ ಹೆಲ್ತಕೇರ್‌ ಸರ್ವೀಸಸ್‌ ಪ್ರೈ ಲಿಮಿಟೆಡ್‌ ನ ನೂತನ ಆಸ್ಪತ್ರೆಯಾಗಿರುವ ಜಯನಗರ ಯುನೈಟೆಡ್‌ ಆಸ್ಪತ್ರೆ ಉದ್ಘಾಟನೆಗೆ ಸಿದ್ದವಾಗಿದ್ದು, ಎಲ್ಲಾ ರೀತಿಯ ಸೌಲಭ್ಯಗಳು ಹಾಗೂ ಮಾನವ ಸಂಪನ್ಮೂಲ ಹೊಂದಿದೆ. ಕರೊನಾ ಸಾಂಕ್ರಾಮಿಕದ ವಿರುದ್ದ ಹೋರಾಡಲು ಲಸಿಕಾರಣ ಅಭಿಯಾನ ಪ್ರಮುಖವಾದ ಅಸ್ತವಾಗಿದೆ. ಈ ಹಿನ್ನಲೆಯಲ್ಲಿ ಉದ್ಘಾಟನೆಗೂ ಮುನ್ನವೇ ನಾಲ್ಕು ಅಂತಸ್ತಿನ ಕಟ್ಟಡವನ್ನು ಹಾಗೂ ನಮ್ಮ ಎಲ್ಲಾ ಅತ್ಯಾಧುನಿಕ ಗುಣಮಟ್ಟದ ಸೇವೆಗಳನ್ನು ಕೇವಲ ಲಸಿಕೆ ನೀಡುವ ಉದ್ದೇಶಕ್ಕಾಗಿ ಬಳಸಿಕೊಳ್ಳುತ್ತಿದ್ದೇವೆ (ಎರಡು ವಾರಗಳ ಕಾಲ) ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದರು. 

ಈ ಲಸಿಕೆಯನ್ನು ಅತ್ಯಂತ ಜತನದಿಂದ ಕಾಪಾಡಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ನಾವುಗಳು ದಿನದ ಎಲ್ಲಾ ಸಮಯದಲ್ಲೂ ಅತ್ಯಂತ ನಿಗಾಇಡುವ ನಿಟ್ಟಿನಲ್ಲಿ ನೂತನ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದ್ದೇವೆ. ದೇಶದ ಯಾವುದೇ ಮೂಲೆಯಿಂದ ತಾಪಾಂಶದಲ್ಲಿ ಆಗುವ ಬದಲಾವಣೆಗಳನ್ನು ಮಾನಿಟರ್‌ ಮಾಡಬಹುದಾಗಿದೆ. ಹಾಗೂ ತುರ್ತು ಸಂಧರ್ಭದಲ್ಲಿ ಅಟೋಮ್ಯಾಟಿಕ್‌ ಆಗಿ ಎಸ್‌ಎಂಎಸ್‌ ಅಲರ್ಟ್‌ ಕಳುಹಿಸುವ ತಂತ್ರಜ್ಞಾನ ಇದಾಗಿದ್ದು, ತಕ್ಷಣ ನಮ್ಮ ತಂಡ ಸ್ಥಳಕ್ಕೆ ಆಗಮಿಸಿ ತುರ್ತು ಕಾರ್ಯಗಳಲ್ಲಿ ತೊಡಗಿಕೊಳ್ಳಬಹುದಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಶಾಂತಕುಮಾರ್‌ ಮುರುಡಾ ಹೇಳಿದರು. 

ಯುನೈಟೆಡ್‌ ಆಸ್ಪತ್ರೆ ಜಯನಗರ, ಅತ್ಯಾಧುನಿಕ ಆಪರೇಷನ್‌ ಥಿಯೇಟರ್‌, ಐ.ಸಿ.ಯು ಸೌಲಭ್ಯ, ಡಯಾಗ್ನೋಸ್ಟಿಕ್ಸ್‌ ಹಾಗೂ ವೆಲ್‌ನೆಸ್‌ ಸೌಲಭ್ಯ ಹೊಂದಿರುವ ನವನಿರ್ಮಿತ ಆಸ್ಪತ್ರೆಯಾಗಿದೆ. ಶೀಘ್ರದಲ್ಲೇ ಇದರ ಉದ್ಘಾಟನೆಯ ಬಗ್ಗೆ ವಿಸ್ತ್ರುತ ಮಾಹಿತಿ ಮಾಹಿತಿಗಳನ್ನು ನೀಡಲಾಗುವುದು ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ.ವಿಕ್ರಮ್‌ ಸಿದ್ದಾರೆಡ್ಡಿ ಹೇಳಿದರು

ಲಸಿಕೆಯನ್ನು ಪಡೆದುಕೊಳ್ಳಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಫರ್ಕಿಸಬಹುದಾಗಿದೆ. ಅಲ್ಲದೆ, ವಾಟ್ಸಾಪ್‌ ನಲ್ಲಿ ಅತ್ಯಂತ ಸುಲಭವಾಗಿ ಲಸಿಕೆ ಪಡೆದುಕೊಳ್ಳುವ ಸ್ಲಾಟ್‌ ಬುಕ್‌ ಮಾಡಬಹುದಾಗಿದೆ. ವಾಟ್ಸಾಪ್‌ ನಂ: 99169 77777

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!