ದೊಡ್ಡಬಳ್ಳಾಪುರ: ನಗರದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಶಿಲೀಂಧ್ರ (ಬ್ಲಾಕ್ ಫಂಗಸ್) ಶಸ್ತ್ರಚಿಕಿತ್ಸೆಗೊಳಗಾಗಿದ್ದ ವ್ಯಕ್ತಿ ಗುಣಮುಖರಾಗಿದ್ದಾರೆ ಎನ್ನಲಾಗಿದ್ದು, ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಆಸ್ಪತ್ರೆಗೆ ಭೇಟಿ ನೀಡಿ ಶಸ್ತ್ರಚಿಕಿತ್ಸೆಗೊಳಗಾಗಿದ್ದ ವ್ಯಕ್ತಿಯ ಯೋಗಕ್ಷೇಮವನ್ನು ವಿಚಾರಿಸಿ, ವೈದ್ಯರ ಕಾರ್ಯಕ್ಕೆ ಪ್ರಶಂಸಿಸಿದರು.
ಈ ವೇಳೆ ಆಡಳಿತ ವೈದ್ಯಾಧಿಕಾರಿ ಡಾ.ರಮೇಶ್, ವೈದ್ಯರಾದ ಡಾ.ಸಂತೋಷ್, ಡಾ.ಮಂಜುನಾಥ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..